“ಬಿಜೆಪಿ ಸರಕಾರದ ಅರಾಜಕತೆಯ ದಿನಗಳು” ಕಿರು ಹೊತ್ತಿಗೆ ಇಂದು ಬಿಡುಗಡೆ

Prasthutha|

ಬೆಂಗಳೂರು: ಬಿಜೆಪಿ ಸರಕಾರದ ಅರಾಜಕತೆಯ ದಿನಗಳು ಕಿರು ಹೊತ್ತಿಗೆ ಬಿಡುಗಡೆ ಕಾರ್ಯಕ್ರಮವು ಗುರುವಾರ 11.30ಕ್ಕೆ ಎಸ್ ಡಿಪಿಐ ಕರ್ನಾಟಕ ಮುಖ್ಯ ಕಚೇರಿ 2ನೇ ಮಹಡಿ, ಹಮೀದ್ ಶಾ ಕಾಂಪ್ಲೆಕ್ಸ್ ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಎಸ್ ಡಿಪಿಐ ಪ್ರಕಟಣೆಯಲ್ಲಿ ತಿಳಿಸಿದೆ.
ಎಸ್ ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್, ರಾಷ್ಟ್ರೀಯ ಕಾರ್ಯದರ್ಶಿ ಅಲ್ಫಾನ್ಸ್ ಫ್ರಾಂಕೋ, ಎಸ್ ಡಿಪಿಐ ರಾಜ್ಯ ಉಪಾಧ್ಯಕ್ಷ ದೇವನೂರ ಪುಟ್ಟನಂಜಯ್ಯ, ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಆರ್. ಭಾಸ್ಕರ್ ಪ್ರಸಾದ್, ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಸರ್ ಕೊಡ್ಲಿಪೇಟೆ, ರಾಜ್ಯ ಕಾರ್ಯದರ್ಶಿ ಅಶ್ರಫ್ ಮಾಚಾರ್ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Join Whatsapp