ಮುಂಬೈ: ಹೇರ್‌ಕಟ್ ಚೆನ್ನಾಗಿಲ್ಲವೆಂದು 13 ವರ್ಷದ ಬಾಲಕ ಅಪಾರ್ಟ್‌ಮೆಂಟ್‌ನ 16ನೇ ಮಹಡಿಯಿಂದ ಜಿಗಿದು ಆತ್ಯಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ಬಾಯಂದರ್‌ನಲ್ಲಿ ಗುರುವಾರ ನಡೆದಿದೆ.
ಪೋಷಕರು ಸಲೂನ್‌ಗೆ ಬಾಲಕನನ್ನು ಕರೆದುಕೊಂಡು ಹೋಗಿ ಹೇರ್ ಕಟ್ಟಿಂಗ್ ಮಾಡಿಸಿದ್ದರು. ಆದರೆ ಈ ಹೇರ್ ಸ್ಟೈಲ್ ಹುಡುಗನಿಗೆ ಇಷ್ಟವಾಗಲಿಲ್ಲ. ಇದರಿಂದ ಕೋಪಗೊಂಡ ಬಾಲಕ ಅಪಾರ್ಟ್‌ಮೆಂಟ್‌ನ 16ನೇ ಮಹಡಿಯಲ್ಲಿದ್ದ ತನ್ನ ಮನೆಯ ಶೌಚಗೃಹದ ಕಿಟಕಿಯಿಂದ ಕೆಳಕ್ಕೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಘಟನೆ ಸಂಬಂಧ ನವ್‌ಗರ್ ಪೊಲೀಸರು ಪ್ರಕರಣ ದಾಖಲಿಸಿದ್ದು, ತನಿಖೆ ಕೈಗೊಂಡಿದ್ದಾರೆ.