ಆನ್ ಲೈನ್ ನಲ್ಲಿ ಆಟವಾಡುತ್ತಿದ್ದ ಬಾಲಕ 11 ನೇ ಮಹಡಿಯಿಂದ ಕೆಳಗೆ ಬಿದ್ದು ಸಾವು

Prasthutha|

ಬೆಂಗಳೂರು: ಮೊಬೈಲ್ ನಲ್ಲಿ ಆನ್ ಲೈನ್  ಆಟವಾಡುತ್ತಿದ್ದ ಬಾಲಕ 11ನೇಯ ಮಹಡಿಯಿಂದ ಬಿದ್ದು ಸಾವನ್ನಪ್ಪಿರುವ ಘಟನೆ ನಿನ್ನೆ ಸಂಜೆ ಬೆಂಗಳೂರಿನ ಬನಶಂಕರಿಯ ಶೋಭಾ ವಾಲ್ಯೂ ವೀವ್ ಅಪಾರ್ಟ್ ಮೆಂಟ್ ನಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

- Advertisement -

ಹತ್ತು ವರ್ಷದ ಗಗನ್ ಮೃತ ಬಾಲಕ ಎಂದು ತಿಳಿದು ಬಂದಿದೆ.

ಮನೆಯಲ್ಲಿ ತಂದೆ ತಾಯಿ ಇಲ್ಲದ ವೇಳೆ ಘಟನೆ ನಡೆದಿದ್ದು, ರಾಜರಾಜೇಶ್ವರಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp