ಕ್ರಿಕೆಡ್ ಆಡಿ ನೀರು ಕುಡಿದ ತಕ್ಷಣ ಸಾವಿಗೀಡಾದ ಬಾಲಕ

Prasthutha|

ಲಕ್ನೋ: ಕ್ರಿಕೆಟ್‌ ಆಡಿದ ಬಳಿಕ ತಂಪಾದ ನೀರು ಕುಡಿದ ಬಳಿಕ ಬಾಲಕ ತಕ್ಷಣ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಅಲ್ಮೋರಾ ಜಿಲ್ಲೆಯಲ್ಲಿ ನಡೆದಿದೆ. ಹಸನ್‌ಪುರದ ಕಾಯಸ್ತಾನ್‌ನ 10ನೇ ತರಗತಿ ವಿದ್ಯಾರ್ಥಿ ಪ್ರಿನ್ಸ್ ಸೈನಿ ಮೃತ ಬಾಲಕ. ತನ್ನ ಸ್ನೇಹಿತರೊಂದಿಗೆ ಕ್ರಿಕೆಟ್ ಆಡಲು ಹೋಗಿದ್ದ ವೇಳೆ ಈ ಘಟನೆ ನಡೆದಿದೆ.

- Advertisement -

ನೀರು ಕುಡಿದ ತಕ್ಷಣವೇ ಆತ ಪ್ರಜ್ಞೆ ತಪ್ಪಿದ್ದಾನೆ. ಸ್ನೇಹಿತರು ವಿಚಾರವನ್ನು ಮನೆಯವರಿಗೆ ತಿಳಿಸಿದ್ದು, ಬಾಲಕನನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಪರೀಕ್ಷೆ ಮಾಡಿದ ವೈದ್ಯರು ಬಾಲಕ ಈಗಾಗಲೇ ಮೃತಪಟ್ಟಿರುವುದಾಗಿ ಹೇಳಿದ್ದಾರೆ. ಬಾಲಕನ ಸಾವಿಗೆ ಹೃದಯಾಘಾತವೇ ಕಾರಣವಿರಬಹದೆಂದು ಶಂಕಿಸಲಾಗಿದೆ.

- Advertisement -

Join Whatsapp