Home ಟಾಪ್ ಸುದ್ದಿಗಳು ಉದ್ಘಾಟನೆಗೆ ದಿನಗಳಿರುವಾಗ 12 ಕೋಟಿ ವೆಚ್ಚದಲ್ಲಿ ನಿರ್ಮಿಸಿದ್ದ ಸೇತುವೆ ಕುಸಿತ

ಉದ್ಘಾಟನೆಗೆ ದಿನಗಳಿರುವಾಗ 12 ಕೋಟಿ ವೆಚ್ಚದಲ್ಲಿ ನಿರ್ಮಿಸಿದ್ದ ಸೇತುವೆ ಕುಸಿತ

ಪಾಟ್ನಾ: 12 ಕೋಟಿ ವೆಚ್ಚದಲ್ಲಿ ನಿರ್ಮಿಸಿದ್ದ ಸೇತುವೆಯೊಂದು ಉದ್ಘಾಟನೆಗೆ ದಿನಗಳಿರುವಾಗ ಕುಸಿದು ಬಿದ್ದ ಆತಂಕಕಾರಿ ಘಟನೆ ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ನಡೆದಿದೆ. ಸೇತುವೆ ಕುಸಿದು ಬೀಳುತ್ತಿರುವ ದೃಶ್ಯ ಮೊಬೈಲ್ ಕ್ಯಾಮರಾದಲ್ಲಿ ಸೆರೆ ಆಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸೇತುವೆ ಕುಸಿಯುತ್ತಿರುವ ವೇಳೆ ನದಿಯ ದಡದಲ್ಲಿ ಜನಸಾಮಾನ್ಯರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದು, ಘಟನೆಯನ್ನು ತಮ್ಮ ಮೊಬೈಲ್​ನಲ್ಲಿ ಸೆರೆಹಿಡಿದಿದ್ದಾರೆ.

ನಿರ್ಮಾಣ ಕಂಪನಿಯ ಮಾಲೀಕರ ನಿರ್ಲಕ್ಷ್ಯದಿಂದ ಸೇತುವೆ ಕುಸಿತ ಕಂಡಿದೆ. ಈ ಬಗ್ಗೆ ಆಡಳಿತವು ತನಿಖೆ ನಡೆಸಬೇಕು ಎಂದು ನಾವು ಒತ್ತಾಯಿಸುತ್ತೇವೆ ಎಂದು ಸಿಕ್ತಿ ಶಾಸಕ ವಿಜಯ್ ಕುಮಾರ್ ಹೇಳಿದ್ದಾರೆ.ಒ

ಕುಸಿತದಲ್ಲಿ ಯಾವುದೇ ಸಾವು-ನೋವು ವರದಿಯಾಗಿಲ್ಲ. ಬಿಹಾರದ ಅರಾರಿಯಾ ಜಿಲ್ಲೆಯ ಕುರ್ಸಕಾಂತ ಮತ್ತು ಸಿಕ್ತಿ ನಡುವಿನ ಪ್ರಯಾಣದ ಅನುಕೂಲಕ್ಕಾಗಿ ಈ ಸೇತುವೆಯನ್ನು ನಿರ್ಮಿಸಲಾಗಿತ್ತು.

ಬಿಹಾರದಲ್ಲಿ ನಿರ್ಮಾಣ ಹಂತದ ಸೇತುವೆಗಳು ಉದ್ಘಾಟನೆಗೂ ಮೊದಲೇ ಕುಸಿಯುವುದು ಹೊಸದೇನಲ್ಲ, ಈ ಹಿಂದೆ ಭಗಲ್ಪುರದ ಸೇತುವೆಯೂ ಹೀಗೆ ಉದ್ಘಾಟನೆ ಮಾಡುವ ಮೊದಲೇ ಕುಸಿದು ಬಿದ್ದಿತ್ತು. ಈ ಸೇತುವೆ ಕುಸಿತಗಳು ರಾಜ್ಯದಲ್ಲಿ ಸರ್ಕಾರಿ ಕಾಮಗಾರಿಗಳಲ್ಲಿ ನಡೆಯುತ್ತಿರುವ ಹಗರಣ ಹಾಗೂ ಭ್ರಷ್ಟಾಚಾರಗಳನ್ನು ಎತ್ತಿ ತೋರಿಸುತ್ತಿವೆ ಎಂದು ಸಾರ್ವಜನಿಕರು ಅಭಿಪ್ರಾಯಿಸಿದ್ದಾರೆ.

Join Whatsapp
Exit mobile version