ಸ್ಕೂಟರ್ ಗೆ ಕಾರು ಡಿಕ್ಕಿ; ಮಹಿಳೆ ಮೃತ್ಯು

Prasthutha|

ಮಂಗಳೂರು: ಸ್ಕೂಟರ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಹಿಂಬದಿ ಸವಾರ ಮಹಿಳೆಯೊಬ್ಬರು ಮೃತಪಟ್ಟ ಘಟನೆ ತೊಕ್ಕೊಟ್ಟು ಸಮೀಪದ ಕಾಪಿಕಾಡು ಎಂಬಲ್ಲಿ ನಡೆದಿದೆ. ಈ ಮಧ್ಯೆ ಅಪಘಾತಕ್ಕೆ ಕಾರಣವಾದ ಕಾರಿನ ಚಾಲಕ ನಿಲ್ಲಿಸದೆ ಪರಾರಿಯಾಗಿದ್ದಾನೆ.

- Advertisement -

ಮೃತ ಮಹಿಳೆ ಕಾಪಿಕಾಡ್ ಉಮಾಮಹೇಶ್ವರಿ ದೇವಸ್ಥಾನದ ಬಳಿಯ ನಿವಾಸಿ ಎಮಿಲ್ಡ ಡಿಸೋಜ (59) ಎಂಬವರಾಗಿದ್ದಾರೆ. ದ್ವಿಚಕ್ರ ವಾಹನ ಕಾಪಿಕಾಡು ರಾಜ್ ಕೇಟರರ್ಸ್ ಬಳಿ ತಲುಪುತ್ತಿದ್ದಂತೆ ಹಿಂದಿನಿಂದ ಬಂದ ಕಾರೊಂದು ಢಿಕ್ಕಿ ಹೊಡೆದ ರಸ್ತೆಗೆ ಎಸೆಯಲ್ಪಟ್ಟ ಎಮಿಲ್ಡ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಕೊನೆಯುಸಿರೆಳೆದಿದ್ದಾರೆ.

ಇಂದು ಮೊಮ್ಮಗಳ ಹುಟ್ಟುಹಬ್ಬವಾದ ಕಾರಣ  ತೊಕ್ಕೊಟ್ಟು ಚರ್ಚ್ ಗೆ ತೆರಳಿ ವಿಶೇಷ ಪೂಜೆಯಲ್ಲಿ ಪಾಲ್ಗೊಂಡು ವಾಪಸ್ ಆಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಸ್ಕೂಟರ್ ಚಲಾಯಿಸುತ್ತಿದ್ದ ಪ್ಲೇವಿ ಡಿಸೋಜ(47) ಕೂಡಾ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

- Advertisement -

ಘಟನೆಯ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

Join Whatsapp