ಹೆದ್ದಾರಿಯಲ್ಲಿ ಎಮ್ಮೆಗೆ ಡಿಕ್ಕಿ ಹೊಡೆದ‌ ಕಾರು ಭಸ್ಮ

Prasthutha|

ಮಂಡ್ಯ: ಹೆದ್ದಾರಿ ಮಧ್ಯೆ ಎಮ್ಮೆಗೆ ಡಿಕ್ಕಿ ಹೊಡೆದು ಕಾರು ಹೊತ್ತಿ ಉರಿದ ಘಟನೆ ನಾಗಮಂಗಲ ತಾಲೂಕಿನ ಬೆಳ್ಳೂರು ಕ್ರಾಸ್ ಬಳಿ ನಡೆದಿದೆ.

- Advertisement -

ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ತೆರಳುತ್ತಿದ್ದ ವೇಳೆ ಕಾರಿಗೆ ಎಮ್ಮೆ ಅಡ್ಡಬಂದಿದ್ದು, ಚಾಲಕನ ನಿಯಂತ್ರಣ ತಪ್ಪಿ ಡಿಕ್ಕಿಯಾಗಿದೆ.

ಈ ವೇಳೆ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನೋಡ ನೋಡುತ್ತಿದ್ದಂತೆ ಸಂಪೂರ್ಣ ಕಾರು ಹೊತ್ತಿ ಉರಿದಿದೆ. ಅದೃಷ್ಟವಶಾತ್​ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

- Advertisement -

ಬೆಳ್ಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.




Join Whatsapp