ಬೈಕ್ ಗೆ ಡಿಕ್ಕಿ ಹೊಡೆದು ಮನೆಗೆ ನುಗ್ಗಿದ ಕಾರು: ಅದೃಷ್ಟವಶಾತ್ ಪಾರು

Prasthutha|

ಚಿಕ್ಕಮಗಳೂರು: ರಿಟ್ಜ್ ಕಾರೊಂದು ಬೈಕ್ ಗೆ ಡಿಕ್ಕಿ ಹೊಡೆದ ಬಳಿಕ ರಸ್ತೆ ಬದಿಯ ಮನೆಯೊಂದಕ್ಕೆ ನುಗ್ಗಿ ಉರುಳಿ ಬಿದ್ದಿರುವ ಘಟನೆ ಕೊಪ್ಪ ತಾಲೂಕಿನ ಶಾಂತಿಪುರ ಬಳಿ ಶುಕ್ರವಾರ ನಡೆದಿದೆ.

- Advertisement -

ರಾಜ್ಯ ಹೆದ್ದಾರಿ 27ರಲ್ಲಿ ಈ ಘಟನೆ ನಡೆದಿದೆ. ಪಲ್ಸರ್ ಬೈಕ್ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾರು ನುಗ್ಗಿದ ರಭಸಕ್ಕೆ ಮನೆಯ ಮುಂಭಾಗದ ಗೋಡೆ ಕುಸಿದಿದ್ದು, ಸ್ವಲ್ಪದರಲ್ಲೇ ಮನೆಯವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮನೆಯ ಒಂದು ಭಾಗಕ್ಕೆ ಸಂಪೂರ್ಣ ಹಾನಿಯಾಗಿದೆ.

- Advertisement -

ಜಯಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Join Whatsapp