ನಮ್ಮ ಮೇಲೆ ಕೇಸ್ ಹಾಕಿದ್ರಲ್ಲಾ, ಅದಕ್ಕೆ ಏನೆಂದು ಕರೆಯುವುದು?: ಸಿದ್ದರಾಮಯ್ಯ

Prasthutha|

ಮೈಸೂರು: ‘ನನ್ನ, ಡಿ.ಕೆ. ಶಿವಕುಮಾರ್ ಹಾಗೂ ರಾಹುಲ್ ಗಾಂಧಿ ಅವರ ಮೇಲೆ ಕೇಸ್ ಹಾಕಿದ್ರಲ್ಲಾ ಅದಕ್ಕೆ ಏನೆಂದು ಕರೆಯುವುದು?’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಳಿದರು.

- Advertisement -


‘ದೇವೇಗೌಡರ ಕುಟುಂಬದ ನಂತರ ಯಡಿಯೂರಪ್ಪ ಅವರ ಕುಟುಂಬವನ್ನು ಗುರಿ ಮಾಡಲಾಗಿದೆ’ ಎಂಬ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿಕೆಗೆ ಇಲ್ಲಿ ಶನಿವಾರ ತಿರುಗೇಟು ನೀಡಿದ ಅವರು, ‘ರಾಹುಲ್ ಗಾಂಧಿ ಅವರ ಸದಸ್ಯತ್ವವನ್ನೇ ರದ್ದುಗೊಳಿಸಿದ್ದರಲ್ಲಾ ಅದಕ್ಕೆ ಏನೆಂದು ಕರೆಯುವುದು? ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಜೈಲಿಗೇ ಕಳಿಸಿದ್ದಾರಲ್ಲಾ ಅದಕ್ಕೆ ಏನೆಂದು ಕರೆಯುವುದು? ದ್ವೇಷದ ರಾಜಕಾರಣ ಎಂದು ಕರೆಯಬೇಕೋ ಅಥವಾ ಪ್ರೀತಿಯ ರಾಜಕಾರಣ ಎನ್ನಬೇಕಾ? ಸೇಡಿನ ರಾಜಕಾರಣ ಮಾಡುವವರು ಅವರು. ಅದೇ ಬಿಜೆಪಿಯವರ ಕೆಲಸ. ನಾವು ಯಾವತ್ತು ಕೂಡ ಸೇಡಿನ ರಾಜಕಾರಣ ಮಾಡುವುದಿಲ್ಲ. ನಾನು ನೆನ್ನೆ–ಮೊನ್ನೆ ರಾಜಕೀಯಕ್ಕೆ ಬಂದಿಲ್ಲ. ಇಂದಿನವರೆಗೂ ಯಾರ ಮೇಲೂ ಸೇಡಿನ ರಾಜಕಾರಣ ಮಾಡಿಲ್ಲ’ ಎಂದರು.

Join Whatsapp