Home ಟಾಪ್ ಸುದ್ದಿಗಳು ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಉಸಿರಾಟದ ತೊಂದರೆ; ತುರ್ತು ಚಿಕಿತ್ಸೆ ನೀಡಿ ಪ್ರಾಣ ರಕ್ಷಿಸಿದ ತೆಲಂಗಾಣ ರಾಜ್ಯಪಾಲೆ

ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಉಸಿರಾಟದ ತೊಂದರೆ; ತುರ್ತು ಚಿಕಿತ್ಸೆ ನೀಡಿ ಪ್ರಾಣ ರಕ್ಷಿಸಿದ ತೆಲಂಗಾಣ ರಾಜ್ಯಪಾಲೆ

ಹೊಸದಿಲ್ಲಿ: ವಿಮಾನದಲ್ಲಿ ಪ್ರಯಾಣಿಸುವಾಗ ಐಪಿಎಸ್ ಅಧಿಕಾರಿಯೊಬ್ಬರಿಗೆ ಉಸಿರಾಟದ ತೊಂದರೆ‌ ಕಾಣಿಸಿಕೊಂಡಿದ್ದು,   ತೆಲಂಗಾಣ ರಾಜ್ಯಪಾಲರಾದ ತಮಿಳಿಸೈ ಸೌಂದರರಾಜನ್ ಅವರು ತಕ್ಷಣವೇ ಪ್ರಥಮ ಚಿಕಿತ್ಸೆ ನೀಡಿ ಪ್ರಾಣ ಉಳಿಸಿದ್ದಾರೆ.

ದೆಹಲಿಯಿಂದ ಹೈದರಾಬಾದ್ ಗೆ ಆಗಮಿಸುತ್ತಿದ್ದ ವಿಮಾನದಲ್ಲಿ ಹೆಚ್ಚುವರಿ ಡಿಜಿಪಿ ಶ್ರೇಣಿಯ ಐಪಿಎಸ್ ಅಧಿಕಾರಿ ಕೆ ಟಿ ಉಜೇಲಾ ಅವರ ಆರೋಗ್ಯದಲ್ಲಿ ಏರುಪೇರು ಕಂಡು ಬಂದಿದೆ.

ಈ ವೇಳೆ ಪ್ರಯಾಣಿಕರಲ್ಲಿ ಯಾರಾದರೂ ವೈದ್ಯರು ಇದ್ದಾರೆಯೇ ಎಂದು  ವಿಮಾನದ ಸಿಬ್ಬಂದಿ  ಕೇಳಿದಾಗ ತಕ್ಷಣವೇ ತಮಿಳಿಸೈ ಸೌಂದರರಾಜನ್ ಮಂದೆ ಬಂದು ಯಶಸ್ವಿಯಾಗಿ ನಿಭಾಯಿಸಿದ್ದಾರೆ.

ತೆಲಂಗಾಣದ ರಾಜ್ಯಪಾಲರಾದ ತಮಿಳಿಸೈ ಸೌಂದರರಾಜನ್ ಅವರು ತಮ್ಮ ರಾಜಕೀಯ ಪ್ರವೇಶಕ್ಕೂ ಮುನ್ನ ಸ್ತ್ರೀರೋಗ ತಜ್ಞರಾಗಿದ್ದರು.

Join Whatsapp
Exit mobile version