Home Uncategorized ಬೆಂಗಳೂರು ಕಂಬಳಕ್ಕೆ ಒಂದು ಕೋಟಿ ರೂ. ಘೋಷಿಸಿದ ಸಿಎಂ

ಬೆಂಗಳೂರು ಕಂಬಳಕ್ಕೆ ಒಂದು ಕೋಟಿ ರೂ. ಘೋಷಿಸಿದ ಸಿಎಂ

ಬೆಂಳೂರು: ಪ್ರಥಮ ಬಾರಿಗೆ ಬೆಂಗಳೂರಿನಲ್ಲಿ ಕಂಬಳ‌ ನಡೆಯಲಿದ್ದು, ಬಹಳ ಅದ್ಧೂರಿಯ ನಡೆಸಲು ಸಿದ್ಧತೆ ಆರಂಭವಾಗಿದೆ. ಈ ಕಂಬಳಕ್ಕೆ ಸಿಎಂ ಸಿದ್ದರಾಮಯ್ಯ ಒಂದು ಕೋಟಿ ರೂ. ಘೋಷಿಸಿದ್ದಾರೆ ಎಂದು ಕಂಬಳ ಸಮಿತಿ ಉಪಾಧ್ಯಕ್ಷ ಗುಣರಂಜನ್ ಶೆಟ್ಟಿ ತಿಳಿಸಿದ್ದಾರೆ.

ನ. 25, 26ರಂದು ಅರಮನೆ ಮೈದಾನದಲ್ಲಿ ಕಂಬಳ ನಡೆಯಲಿದ್ದು, ಕಂಬಳಕ್ಕೆ 3ರಿಂದ 5 ಲಕ್ಷ ಜನರು ಬರುವ ನಿರೀಕ್ಷೆ ಇಟ್ಕೊಳ್ಳಲಾಗಿದೆ ಎಂದು
ಕಂಬಳ ಸಮಿತಿ (ರಿ.) ಗೌರವಾಧ್ಯಕ್ಷ ಕೆ. ಪ್ರಕಾಶ್ ಶೆಟ್ಟಿ ತಿಳಿಸಿದ್ದಾರೆ.

ಬೆಂಗಳೂರು ಕಂಬಳ ತಯಾರಿ ಸಲುವಾಗಿ ಬೆಂಗಳೂರಿನ ಬಂಟರ ಸಂಘದಲ್ಲಿ ಕರಾವಳಿಯ ವಿವಿಧ ಜಾತಿ-ಭಾಷಾ ಸಂಘಟನೆಗಳ ಜೊತೆ ನಡೆದ ಬೃಹತ್ ಸಮಾಲೋಚನಾ ಸಭೆ ನಡೆದಿದೆ. ಸಭೆಯ ಬಳಿಕ ಆಯೋಜಿಸಿದ ಬಹಿರಂಗ ಸಮಾವೇಶದಲ್ಲಿ ಅವರು ಮಾತಾಡಿದರು. ಇದು ಐತಿಹಾಸಿಕ ಕಾರ್ಯಕ್ರಮವಾಗಿದ್ದು, ಕರಾವಳಿಯ ಸಮಸ್ತ ಸಮುದಾಯದವರು ಒಂದೆಡೆ ಒಗ್ಗಟ್ಟಾಗಿ ಸೇರುವ ಬೃಹತ್ ವೇದಿಕೆ ಇದಾಗಲಿದೆ ಎಂದು ಅವರು ಹೇಳಿದ್ದಾರೆ.

ಕಂಬಳ ಸಮಿತಿ ಅಧ್ಯಕ್ಷ, ಶಾಸಕ ಅಶೋಕ್ ರೈ ಮಾತಾಡಿ, ಬಹು ನಿರೀಕ್ಷಿತ ಈ ಕಂಬಳಕ್ಕೆ ಈಗಾಗಲೇ 150ಕ್ಕೂ ಅಧಿಕ ಕೋಣಗಳ ನೋಂದಣಿ ಆಗಿದ್ದು, ಆ ಎಲ್ಲ ಕೋಣಗಳನ್ನು ನ.23ರಂದು ಉಪ್ಪಿನಂಗಡಿಯಲ್ಲಿ ಬೀಳ್ಕೊಡುಗೆ ಮಾಡಿ ಕಳಿಸಿಕೊಡಲಾಗುವುದು ಎಂದು ತಿಳಿಸಿದ್ದಾರೆ.. ಅಷ್ಟೂ ಕೋಣಗಳನ್ನು ಹಾಸನ ಹಾಗೂ ನೆಲಮಂಗಲದಲ್ಲಿ ಅದ್ಧೂರಿಯಾಗಿ ಸ್ವಾಗತಿಸಿಕೊಳ್ಳಲಾಗುವುದು. ಅಲ್ಲದೆ ಪ್ರತಿ ತಾಲೂಕಲ್ಲೂ ಸ್ವಾಗತ-ಬೀಳ್ಕೊಡುಗೆ ಇರಲಿದೆ ಎಂದರು. ಕಂಬಳ ಬೆಂಗಳೂರಿನ ಅರಮನೆ ಮೈದಾನದ 70 ಎಕರೆ ಜಾಗದಲ್ಲಿ ನಡೆಯಲಿದೆ ಎಂದು ತಿಳಿಸಿದರು. ‘

ಸಮಿತಿ ಕಾರ್ಯಾಧ್ಯಕ್ಷ, ಸಂಗೀತ ನಿರ್ದೇಶಕ ಗುರುಕಿರಣ್ ರವರ ಸಂಗೀತದ ‘ನಮ್ಮ ಕಂಬಳ’ ಎಂಬ ಥೀಮ್ ಸಾಂಗ್ ಇದೇ ಸಂದರ್ಭದಲ್ಲಿ ಬಿಡುಗಡೆ ಮಾಡಲಾಯಿತು.

ಸಮಿತಿ ಸಂಘಟನಾ ಅಧ್ಯಕ್ಷ ಉಮೇಶ್ ಶೆಟ್ಟಿ ಮಾತಾಡಿ, ಬೆಂಗಳೂರು ಕಂಬಳಕ್ಕೆ ಬಾಲಿವುಡ್ ನಟಿ ಐಶ್ವರ್ಯಾ ರೈ, ಕರಾವಳಿ ಬೆಡಗಿ ಅನುಷ್ಕಾ ಶೆಟ್ಟಿ ಸೇರಿದಂತೆ ವಿವಿಧ ಚಿತ್ರರಂಗಗಳಲ್ಲಿ ಇರುವ ಕರಾವಳಿ ಮೂಲದ ವಿವಿಧ ಸ್ಟಾರ್‌ಗಳು ಆಗಮಿಸಲಿದ್ದಾರೆ ಎಂದರು

Join Whatsapp
Exit mobile version