Home Uncategorized ಮುಸ್ಲಿಮರನ್ನು ಕೊಲ್ಲುವಂತಹ ದಿನ ಬರುತ್ತದೆ: ಈಶ್ವರಪ್ಪ ವಿರುದ್ಧ ಸುಮೋಟೋ ಕೇಸ್

ಮುಸ್ಲಿಮರನ್ನು ಕೊಲ್ಲುವಂತಹ ದಿನ ಬರುತ್ತದೆ: ಈಶ್ವರಪ್ಪ ವಿರುದ್ಧ ಸುಮೋಟೋ ಕೇಸ್

0

ಶಿವಮೊಗ್ಗ: ವಕ್ಪ್ ಆಸ್ತಿಗೆ ಸಂಬಂಧಿಸಿದಂತೆ ಮುಸ್ಲಿಮರ ವಿರುದ್ದ ಮಾತನಾಡಿದ್ದ ಮಾಜಿ ಉಪಮುಖ್ಯಮಂತ್ರಿ ಕೆಎಸ್ ಈಶ್ವರಪ್ಪ ವಿರುದ್ಧ ದೂರು ದಾಖಲಾಗಿದೆ.


ನವೆಂಬರ್ 13 ರಂದು ಈಶ್ವರಪ್ಪ ಅವರು ಶಿವಮೊಗ್ಗದಲ್ಲಿ ನಡೆಸಿದ್ದ ಪತ್ರಿಕಾಗೋಷ್ಠಿಯಲ್ಲಿ ವಕ್ಫ್ ವಿಚಾರವಾಗಿ ಮುಸ್ಲಿಮರ ವಿರುದ್ಧ ಹೇಳಿಕೆ ನೀಡಿದ್ದರು.


ಈ ಹಿನ್ನೆಲೆಯಲ್ಲಿ ಸಮಾಜದಲ್ಲಿ ಅಶಾಂತಿ ಸೃಷ್ಟಿಗೆ ಯತ್ನಿಸಿದ್ದಾರೆ ಎಂಬ ಆರೋಪದಡಿಯಲ್ಲಿ ಶಿವಮೊಗ್ಗದ ಜಯನಗರ ಠಾಣೆಯಲ್ಲಿ ಸುಮೋಟೋ ಕೇಸ್ ದಾಖಲಾಗಿದೆ.


ವಕ್ಫ್ ಆಸ್ತಿ ವಿಚಾರದ ಬಗ್ಗೆ ನವೆಂಬರ್ 13ರಂದು ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದ ಈಶ್ವರಪ್ಪ, ಸಾಧು ಸಂತರ ನೇತೃತ್ವದಲ್ಲಿ ದಂಗೆ ಏಳಬೇಕಾಗುತ್ತದೆ. ಮುಸ್ಲಿಮರಿಗೆ ರಸ್ತೆಯಲ್ಲಿ ಹುಡುಕಿ ಹುಡುಕಿ ಹೊಡೆಯುತ್ತಾರೆ. ಮುಸ್ಲಿಮರನ್ನು ಕೊಲ್ಲುವಂತಹ ದಿನ ಬರುತ್ತದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಸಂಬಂಧ ಇದೀಗ ಈಶ್ವರಪ್ಪ ಅವರ ಈ ಹೇಳಿಕೆಯಿಂದ ಸಮಾಜದಲ್ಲಿ ಅಶಾಂತಿ ಸೃಷ್ಟಿಯಾಗುತ್ತದೆ ಎಂದು ಶಿವಮೊಗ್ಗದ ಜಯನಗರ ಠಾಣೆ ಪೊಲೀಸರು ಸುಮೋಟೋ ಪ್ರಕರಣ ದಾಖಲಿಸಿಕೊಂಡಿದ್ದಾರೆ.

NO COMMENTS

LEAVE A REPLY

Please enter your comment!
Please enter your name here

Exit mobile version