SDPI ರಾಜ್ಯ ಚುನಾವಣಾ ಉಸ್ತುವಾರಿ ಅಫ್ಸರ್ ಕೊಡ್ಲಿಪೇಟೆ ನೇತೃತ್ವದ ನಿಯೋಗದಿಂದ ನಾಳೆ ದ.ಕ. ಜಿಲ್ಲಾ ಪ್ರವಾಸ

Prasthutha|

ಮಂಗಳೂರು: ಎಸ್’ಡಿಪಿಐ ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಚುನಾವಣಾ ಉಸ್ತುವಾರಿ ಅಫ್ಸರ್ ಕೊಡ್ಲಿಪೇಟೆಯವರ ನೇತೃತ್ವದ ನಿಯೋಗವು ನಾಳೆ (ಆದಿತ್ಯವಾರ) ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದೆ.

- Advertisement -

ಜಿಲ್ಲೆಯ ಬಂಟ್ವಾಳ ಹಾಗೂ ಮಂಗಳೂರು ( ಉಳ್ಳಾಲ) ವಿಧಾನಸಭಾ ಕ್ಷೇತ್ರದ ಚುನಾವಣಾ ನಿರ್ವಹಣಾ ತಂಡ ಹಾಗೂ ಕ್ಷೇತ್ರ  ಮತ್ತು ಜಿಲ್ಲಾ ಸಮಿತಿಯ ನಾಯಕರೊಂದಿಗೆ ಮುಂಬರುವ ಸಾರ್ವತ್ರಿಕ ಚುನಾವಣೆಯ ಕಾರ್ಯತಂತ್ರಗಳ ಕುರಿತು ವಿಶೇಷ ಸಭೆಗಳನ್ನು ನಡೆಸಲಿದ್ದಾರೆ ಎಂದು ಜಿಲ್ಲಾ ಕಾರ್ಯದರ್ಶಿ ಅಕ್ಬರ್ ಬೆಳ್ತಂಗಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Join Whatsapp