ಸೌಜನ್ಯ ಪ್ರಕರಣ ಮರು ತನಿಖೆಗೆ ಆಗ್ರಹಿಸಿ ದ.ಕ, ಉಡುಪಿ ಬಿಜೆಪಿ ಶಾಸಕರ ನಿಯೋಗ ಮುಖ್ಯಮಂತ್ರಿಗಳಿಗೆ ಮನವಿ

Prasthutha|

ಬೆಂಗಳೂರು: ಸೌಜನ್ಯ ಪ್ರಕರಣವನ್ನು ಮರು ತನಿಖೆಗೆ ಒಳಪಡಿಸುವಂತೆ ದ.ಕ ಮತ್ತು ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರ ನಿಯೋಗ ಮುಖ್ಯಮಂತ್ರಿ ಸಿದ್ಧರಾಮಯ್ಯರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.

- Advertisement -

ನಿಯೋಗದ ಮನವಿಗೆ ಉತ್ತರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, “ಸೌಜನ್ಯ ಪ್ರಕರಣವನ್ನು ಮರು ತನಿಖೆಗೆ ಒಳಪಡಿಸಲು ರಾಜ್ಯ ಸರಕಾರಕ್ಕೆ ಕಾನೂನಿನಲ್ಲಿ ಅವಕಾಶವಿರುವುದಿಲ್ಲ. ಈ ವಿಷಯವನ್ನು ಸೌಜನ್ಯ ಪೋಷಕರಿಗೆ ನಾನು ತಿಳಿಸಿದ್ದೇನೆ. ಈಗಾಗಲೇ ಕಾನೂನು ಸಲಹೆಯನ್ನು ನಾನು ಪಡೆದಿರುವುದರಿಂದ ಸೌಜನ್ಯಳ ಪೋಷಕರು  ಮೇಲ್ಮನವಿ ಸಲ್ಲಿಸಬಹುದು ಅಥವಾ ಸಿಬಿಐ ಮೇಲ್ಮನವಿ ಸಲ್ಲಿಸಲು ಅವಕಾಶವಿರುತ್ತದೆ. ನೀವುಗಳು ಬಂದಿರುವುದರಿಂದ ಇನ್ನೊಮ್ಮೆ ನಾನು ಕಾನೂನು ಸಲಹೆ ಪಡೆಯುವುದಾಗಿ ನಿಯೋಗಕ್ಕೆ ಭರವಸೆ ನೀಡಿದರು.

Join Whatsapp