ಅ. 30ರಂದು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ

Prasthutha|

ಮಂಗಳೂರು: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಅ.30ರ ಭಾನುವಾರ ನಗರದ ಶಾರದಾ ವಿದ್ಯಾಲಯ ಸಭಾಂಗಣದಲ್ಲಿ ಮಂಗಳೂರು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ.

- Advertisement -

ಬೆಳಿಗ್ಗೆ 9ಗಂಟೆಗೆ ದ್ವಜಾರೋಹಣ ಆಯೋಜಿಸಲಾಗಿದ್ದು ಪೊಲೀಸ್ ಆಯುಕ್ತ ಶಶಿಕುಮಾರ್ ರಾಷ್ಟ್ರ ದ್ವಜಾರೋಹಣ ನೆರವೇರಿಸುವರು, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತ್ ಅಧ್ಯಕ್ಷ ಎಂ.ಪಿ.ಶ್ರೀನಾಥ್ ಪರಿಷತ್ತಿನ ದ್ವಜಾರೋಹಣ ನೆರವೇರಿಸುವರು ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಮಂಜುನಾಥ ಶ್ರೀಪಾದ ರೇವಣಕರ ಸಮ್ಮೇಳನ ಧ್ವಜಾರೋಹಣ ನೆರವೇರಿಸುವರು.

ಹಿರಿಯ ಸಾಹಿತಿ ಹಾಗೂ ರಂಗಕರ್ಮಿ ಡಾ.ನಾ.ದಾಮೋದರ ಶೆಟ್ಟಿ ಅಧ್ಯಕ್ಷತೆ ವಹಿಸುವರು, ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ನಾಡೋಜ ಡಾ.ಮಹೇಶ್ ಜೋಷಿ ಕಾರ್ಯಕ್ರಮ ಉದ್ಘಾಟಿಸುವರು, ಶಾಸಕರಾದ ವೇದವ್ಯಾಸ್ ಕಾಮತ್ ಪುಸ್ತಕ ಪ್ರದರ್ಶನ ಉದ್ಘಾಟಿಸುವರು, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತ್ ಅಧ್ಯಕ್ಷ ಡಾ.ಎಂ.ಪಿ.ಶ್ರೀನಾಥ್ ಆಶಯ ನುಡಿಯಾಡುವರು, ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಮಂಜುನಾಥ್ ಶ್ರೀಪಾದ ರೇವಣಕರ್ ಸ್ವಾಗತ ಮಾಡುವರು, ನಿತ್ಯಾನಂದ ಕಾರಂತ ಪೊಳಲಿ ಅವರು ನಿಕಟಪೂರ್ವ ಸಮ್ಮೇಳನಾಧ್ಯಕ್ಷರ ನುಡಿಯಾಡುವರು, ಮುಖ್ಯ ಅತಿಥಿಗಳಾಗಿ ಕನ್ನಡ ಸಾಹಿತ್ಯ ಪರಿಷತ್ ಮಾಜಿ ರಾಜ್ಯಾಧ್ಯಕ್ಷ ಡಾ.ಹರಿಕೃಷ್ಣ ಪುನರೂರು, ಶಾರದಾ ಸಮೂಹ ವಿದ್ಯಾಸಂಸ್ಥೆ ಅಧ್ಯಕ್ಷ ಡಾ.ಎಂ.ಬಿ.ಪುರಾಣಿಕ್, ಕ.ಸಾ.ಪ ಜಿಲ್ಲಾ ನಿಕಟಪೂರ್ವ ಅಧ್ಯಕ್ಷ ಪ್ರದೀಪ ಕುಮಾರ ಕಲ್ಕೂರ್, ಅದಾನಿ ಗ್ರೂಪ್ ಅಧ್ಯಕ್ಷ ಕಿಶೋರ್ ಆಳ್ವಾ, ತಾಲೂಕು ನಿಕಟಪೂರ್ವ ಅಧ್ಯಕ್ಷೆ ವಿಜಯ ಲಕ್ಷ್ಮಿ ಶೆಟ್ಟಿ, ಕ.ಸಾ.ಪ ತಾಲೂಕು ಪದಾಧಿಕಾರಿ ಸುಖಲಕ್ಷ್ಮಿ ಸುವರ್ಣ, ಡಾ.ಮೀನಾಕ್ಷಿ ರಾಮಚಂದ್ರ, ಗಣೇಶ್ ಪ್ರಸಾಧ್ ಭಾಗವಹಿಸುವರು.

- Advertisement -
Join Whatsapp
Exit mobile version