ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ಸುಧಾರಾಣಿಯವರಿಗೆ ಡಾಕ್ಟರೇಟ್ ಪದವಿ
Prasthutha: December 20, 2021

ಮೂಡುಬಿದಿರೆ: ಇಲ್ಲಿನ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕಿ ಸುಧಾರಾಣಿ ಇವರ ಸಂಶೋಧನಾ ಮಹಾಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾನಿಲಯ ಪಿ.ಎಚ್.ಡಿ ಪದವಿ ನೀಡಿದೆ.
ಮಂಗಳೂರು ವಿಶ್ವವಿದ್ಯಾನಿಲಯದ ಎಸ್ ವಿ ಪಿ ಕನ್ನಡ ಅಧ್ಯಯನ ಸಂಸ್ಥೆಯ ಸಹ ಪ್ರಾಧ್ಯಾಪಕರು, ಅಂಬಿಗರ ಚೌಡಯ್ಯ ಅಧ್ಯಯನ ಪೀಠದ ಸಂಯೋಜಕರು ಆಗಿರುವ ಡಾ. ನಾಗಪ್ಪ ಗೌಡ ಇವರ ಮಾರ್ಗದರ್ಶನದಲ್ಲಿ ಸುಧಾರಾಣಿಯವರು ಸಿದ್ಧಪಡಿಸಿದ ' ತುಳು ಅನುವಾದ ವಾಙ್ಮಯ : ಅನುಸಂಧಾನದ ನೆಲೆಗಳು' ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾನಿಲಯ ಪಿಎಚ್ ಡಿ ಪದವಿ ನೀಡಿದೆ.
