Home ಟಾಪ್ ಸುದ್ದಿಗಳು ಖಾಸಗಿ ಬಸ್ ಮತ್ತು ಲಾರಿ ನಡುವೆ ಭೀಕರ ಅಪಘಾತ: ನಾಲ್ವರು ಸ್ಥಳದಲ್ಲೇ ಸಾವು

ಖಾಸಗಿ ಬಸ್ ಮತ್ತು ಲಾರಿ ನಡುವೆ ಭೀಕರ ಅಪಘಾತ: ನಾಲ್ವರು ಸ್ಥಳದಲ್ಲೇ ಸಾವು

ತುಮಕೂರು:  ಖಾಸಗಿ ಬಸ್ ಹಾಗೂ ಲಾರಿ ನಡುವೆ ಅಪಘಾತವಾಗಿ ನಾಲ್ವರು ಮೃತಪಟ್ಟ ದಾರುಣ ಘಟನೆ ನಗರದ ಹೊರ ವಲಯದ ಗುಬ್ಬಿ ರಸ್ತೆಯ ಸಿದ್ಧಾರ್ಥ ನಗರದ ಸಮೀಪ ನಡೆದಿದೆ.

ಮೃತರ ವಿವರಗಳು ಇನ್ನೂ ಲಭ್ಯವಾಗಿಲ್ಲ.

ಮಾರುಕಟ್ಟೆಯಿಂದ ಹೂವು ತುಂಬಿಕೊಂಡು ಗುಬ್ಬಿ ಕಡೆಗೆ ಹೋಗುತ್ತಿದ್ದ ಟಾಟಾ ಏಸ್‌ ಹಾಗೂ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಟಾಟಾ ಏಸ್‌ನಲ್ಲಿದ್ದವರು ಮೃತಪಟ್ಟಿದ್ದಾರೆ.

ಅಪಘಾತ ಸಂಭವಿಸುತ್ತಿದ್ದಂತೆ ಜನರು ನೆರವಿಗೆ ಬಂದು, ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಿದರು. ಬಸ್‌ನಲ್ಲಿ ಇದ್ದ ಪ್ರಯಾಣಿಕರು ತುಮಕೂರು ಬಸ್ ನಿಲ್ದಾಣಕ್ಕೆ ತೆರಳಲು ನೆರವಾದರು.

Join Whatsapp
Exit mobile version