ಯಾದಗಿರಿ: ಅರಣ್ಯ ಪ್ರದೇಶದಲ್ಲಿ ಹೊತ್ತಿ ಉರಿಯುತ್ತಿದ್ದ ಬೆಂಕಿ ನಂದಿಸಲು ಹೋಗಿದ್ದ ಅರಣ್ಯ ವೀಕ್ಷಕ ಯಾಕೂಬ್ (55) ಬೆಂಕಿಯಲ್ಲಿ ಸುಟ್ಟು ಮೃತಪಟ್ಟ ದಾರುಣ ಘಟನೆ ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಬಿಳ್ಹಾರ್ ಎಂಬಲ್ಲಿ ನಡೆದಿದೆ.
ಯಾಕೂಬ್ ಸಾವಿಗೆ ಅರಣ್ಯ ಇಲಾಖೆ ನಿರ್ಲಕ್ಷ್ಯವೇ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು, ವಡಗೇರ ಆಸ್ಪತ್ರೆ ಎದುರುಗಡೆಯ ಮುಖ್ಯ ರಸ್ತೆಯ ಮಧ್ಯೆ ಟ್ರಾಕ್ಟರ್ ನಲ್ಲಿ ಮೃತದೇಹವನ್ನಿಟ್ಟು ಪ್ರತಿಭಟನೆ ನಡಸಿದ್ದಾರೆ. ನಂತರ ಆಸ್ಪತ್ರೆಗೆ ಆಗಮಿಸಿದ ಅರಣ್ಯ ಅಧಿಕಾರಿಗೆ ಮುತ್ತಿಗೆ ಹಾಕಿ ಮೃತನ ಕುಟುಂಬಕ್ಕೆ 25 ಲಕ್ಷ ಪರಿಹಾರ ನೀಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.