ಮುಳುಗಿದ ಹಡಗಿಗೆ ಮೀನುಗಾರಿಕಾ ಬೋಟ್ ಡಿಕ್ಕಿ: 11 ಮಂದಿಯ ರಕ್ಷಣೆ, ಓರ್ವ ಕಣ್ಮರೆ

Prasthutha|

ಮಂಗಳೂರು: ಉಳ್ಳಾಲ ಸಮೀಪದ ಸಮುದ್ರದಲ್ಲಿ ಮುಳುಗಿದ ಹಡಗಿಗೆ ಮೀನುಗಾರಿಕಾ ಬೋಟ್ ಡಿಕ್ಕಿ ಹೊಡೆದು ದುರಂತ ಸಂಭವಿಸಿದೆ. ಈ ವೇಳೆ 11 ಮೀನುಗಾರರನ್ನು ರಕ್ಷಣೆ ಮಾಡಲಾಗಿದ್ದರೆ, ಓರ್ವ ಮೀನುಗಾರ ಕಣ್ಮರೆಯಾಗಿದ್ದಾನೆ.

- Advertisement -

ಆದ್ಯ ಎಂಬ ಹೆಸರಿನ ಆಳ ಸಮುದ್ರ ಮೀನುಗಾರಿಕಾ ಬೋಟ್ ಬೆಳಗ್ಗೆ 11 ಗಂಟೆ ಸುಮಾರಿಗೆ ಉಳ್ಳಾಲ ಸಮೀಪದ ಸಮುದ್ರದ ಮಧ್ಯೆ ಕೆಲವು ವರ್ಷಗಳ ಹಿಂದೆ ಮುಳುಗಿದ್ದ ಹಡಗಿಗೆ ಡಿಕ್ಕಿ ಹೊಡೆದಿದೆ. ಬೋಟ್​ ನಲ್ಲಿ 12 ಮಂದಿ ಮೀನುಗಾರರು ಇದ್ದರು. ಬೋಟ್ ಡಿಕ್ಕಿ ಹೊಡೆದ ಪರಿಣಾಮ ಮೀನುಗಾರರು ಸಮುದ್ರಕ್ಕೆ ಬಿದ್ದಿದ್ದು, 11 ಮೀನುಗಾರರನ್ನು ಸಮೀಪದಲ್ಲಿದ್ದ ಇತರ ಮೀನುಗಾರಿಕಾ ಬೋಟ್​ ನವರು ರಕ್ಷಿಸಿದ್ದಾರೆ. ತಮಿಳುನಾಡು ಮೂಲದ ಓರ್ವ ಮೀನುಗಾರ ಕಣ್ಮರೆಯಾಗಿದ್ದಾನೆ. ಕಣ್ಮರೆಯಾಗಿರುವ ಮೀನುಗಾರನ ಶೋಧ ಕಾರ್ಯ ಮುಂದುವರಿದಿದೆ.

ಈ ಪ್ರದೇಶದಲ್ಲಿ ಹಲವು ವರ್ಷಗಳ ಹಿಂದೆ ಹಡಗೊಂದು ಮುಳುಗಿದ್ದು, ಅದನ್ನು ತೆರವುಗೊಳಿಸಲಾಗಿರಲಿಲ್ಲ. ಈ ಮುಳುಗಡೆಯಾಗಿರುವ ಹಡಗಿನ ಜಾಗದಲ್ಲಿ ಯಾವುದೇ ಗುರುತುಗಳು ಇಲ್ಲದೇ ಇರುವುದು ಮೀನುಗಾರಿಕಾ ಬೋಟ್ ಡಿಕ್ಕಿ ಹೊಡೆಯಲು ಕಾರಣ ಎಂದು ತಿಳಿದು ಬಂದಿದೆ.

Join Whatsapp