ನಟ, ಸಾಮಾಜಿಕ ಹೋರಾಟಗಾರ ಚೇತನ್ ಗೆ ನೀಡಲಾಗಿದ್ದ ಗನ್ ಮ್ಯಾನ್ ಹಿಂಪಡೆದ ರಾಜ್ಯ ಸರ್ಕಾರ

Prasthutha|

ಬೆಂಗಳೂರು: ಗೌರಿ ಲಂಕೇಶ್ ಹತ್ಯೆ ಬಳಿಕ ನಟ, ಸಾಮಾಜಿಕ ಹೋರಾಟಗಾರ ಚೇತನ್ ಗೆ ನೀಡಲಾಗಿದ್ದ ಗನ್ ಮ್ಯಾನ್ ಭದ್ರತೆಯನ್ನು ಅನ್ನು ಸರ್ಕಾರ ಹಿಂಪಡೆದಿದೆ.

- Advertisement -

ತಮಗೆ ಈಗಲೂ ಜೀವಕ್ಕೆ ಅಪಾಯವಿದ್ದರೂ, ಗನ್ ಮ್ಯಾನ್ ಹಿಂಪಡೆದಿದ್ದಕ್ಕಾಗಿ ಚೇತನ್, ಶುಕ್ರವಾರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರನ್ನು ಭೇಟಿ ಮಾಡಿದ್ದಾರೆ.

ಈ ಕುರಿತು ಅಸಮಾಧಾನವನ್ನು ವ್ಯಕ್ತಪಡಿಸಿರುವ  ಚೇತನ್, “ನನಗೆ ಈಗಲೂ ಜೀವ ಬೆದರಿಕೆ ಇದೆ. ಗೌರಿ ಲಂಕೇಶ್ ಹತ್ಯೆ ಬಳಿಕ ನೀಡಲಾಗಿದ್ದ ಗನ್ ಮ್ಯಾನ್ ಅನ್ನು ಏಕಾಏಕಿ ಹಿಂಪಡೆದಿದ್ದಾರೆ. ಹಾಗಾಗಿ ಪೊಲೀಸ್ ಆಯುಕ್ತರನ್ನು ಭೇಟಿ ಮಾಡಿ, ಗನ್ ಮ್ಯಾನ್ ವಾಪಸ್ಸು ಕಳುಹಿಸುವಂತೆ ಮನವಿ ಮಾಡಿದ್ದೇನೆ ಎಂದರು. ಹಾಗೂ ತಮ್ಮ ಮನೆಯ ಹತ್ತಿರ ಬೀಟ್ ವ್ಯವಸ್ಥೆಯನ್ನು ಹೆಚ್ಚಿಸುವಂತೆಯೂ ಅವರು ಮನವಿ ಮಾಡಿದ್ದಾರೆ.

- Advertisement -

ನ್ಯಾಯಾಧೀಶರ ಬಗ್ಗೆ ಅವಹೇಳನಕಾರಿ ರೀತಿ  ಟ್ವೀಟ್ ಮಾಡಿದ್ದಾರೆ ಎಂಬ ಆರೋಪದಲ್ಲಿ ಚೇತನ್, 14 ದಿನಗಳ ನ್ಯಾಯಾಂಗ ಬಂಧನದಲ್ಲಿದ್ದರು. ನಂತರ ಅವರಿಗೆ ಜಾಮೀನು ಸಿಕ್ಕಿತ್ತು. ಜೈಲಿನಿಂದ ಆಚೆ ಬಂದ ಮೇಲೂ ತಾವು ಪ್ರಶ್ನಿಸುವುದನ್ನು ನಿಲ್ಲಿಸುವುದಿಲ್ಲ ಎಂದು ಹೇಳಿಕೆ ನೀಡಿದ್ದರು. ಅಲ್ಲದೇ, ಅವರ ಮೇಲೆ ಇನ್ನೂ ಎರಡು ಕೇಸ್ ಗಳು ಬಸವನಗುಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಇವೆಲ್ಲದರ ಹಿನ್ನೆಲೆಯಲ್ಲಿ ಅವರಿಗೆ ನೀಡಲಾಗಿದ್ದ  ಗನ್ ಮ್ಯಾನ್ ಸೆಕ್ಯುರಿಟಿಯನ್ನು ಸರ್ಕಾರ ಹಿಂಪಡೆದಿದೆ ಎನ್ನಲಾಗುತ್ತಿದೆ.

Join Whatsapp