ಚಾಮರಾಜನಗರ: ಕ್ಷುಲ್ಲಕ ಕಾರಣಕ್ಕೆ ಉಂಟಾದ ಜಗಳದಲ್ಲಿ ಪತ್ನಿಯನ್ನು ಕೊಡಲಿಯಿಂದ ಕೊಚ್ಚಿ ಕೊಲೆಗೈದ ಪತಿ ತಾನೇ ತೆರಕಣಾಂಬಿ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ.
ಕಿಲಗೆರೆ ಗ್ರಾಮದಲ್ಲಿ ತನ್ನ ಪತ್ನಿ ಮಹದೇವಮ್ಮ (45 ) ಅವರನ್ನು ಕೊಚ್ಚಿ ಕೊಲೆ ಮಾಡಿದ ಪತಿ ಮಹದೇವಪ್ಪ (50) ಶರಣಾಗಿದ್ದು ಆತನನ್ನು ಬಂಧಿಸಿ ಪೊಲೀಸರು ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.
ಕಿಲಗೆರೆ ಹಾಗೂ ಮಾದಲವಾಡಿ ಗ್ರಾಮದ ನಡುವೆ ಇರುವ ಬೇಲದಕುಪ್ಪೆಯ ಜಮೀನೊಂದರಲ್ಲಿ ವಾಸವಾಗಿದ್ದ ದಂಪತಿ ನಡುವೆ ಇಂದು ಬೆಳಿಗ್ಗೆ 6 ಗಂಟೆ ವೇಳೆ ಕ್ಷುಲ್ಲಕ ಕಾರಣಕ್ಕೆ ಜಗಳ ನಡೆದಿದೆ ಎನ್ನಲಾಗಿದೆ. ಜಗಳ ವಿಕೋಪಕ್ಕೆ ತಿರುಗಿ ಸ್ನಾನದ ಮನೆಯಲ್ಲಿದ್ದ ಪತ್ನಿ ಮಹದೇವಮ್ಮರನ್ನು ಪತಿ ಮಹದೇವಪ್ಪ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದಾನೆ.
ನಂತರ ತೆರಕಣಾಂಬಿ ಪೊಲೀಸ್ ಠಾಣೆಗೆ ಆರೋಪಿ ಮಹದೇವಪ್ಪ ಶರಣಾಗಿದ್ದಾನೆ.
ಮೃತದೇಹವನ್ನು ಚಾಮರಾಜನಗರ ಮೆಡಿಕಲ್ ಬೋಧನಾ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಿ ಪ್ರಕರಣ ದಾಖಲಿಸಿದ್ದಾರೆ.