ನಾಯಿ ಹೊತ್ತೊಯ್ದ ಚಿರತೆ

Prasthutha: August 6, 2022

ಶ್ರವಣಬೆಳಗೊಳ: ಅರ್ಧಗಂಟೆಗೂ ಹೆಚ್ಚು ಕಾಲ ಹೊಂಚು ಹಾಕಿ ಮನೆ ಕಾಂಪೌಡ್ ನಲ್ಲಿ ಕಟ್ಟಿ ಹಾಕಿದ್ದ ನಾಯಿಯನ್ನು ಚಿರತೆ ಹೊತ್ತೊಯ್ದಿರುವ ಘಟನೆ ಇಲ್ಲಿನ ಶ್ರೀ ಕಂಠನಗರ ಬಡಾವಣೆಯಲ್ಲಿ ನಡೆದಿದೆ.

ಬಡಾವಣೆಯ ಪುಟ್ಟಸ್ವಾಮಿ ಎಂಬುವರಿಗೆ ಸೇರಿದ ನಾಯಿಯನ್ನು ಕಾಂಪೌಡ್ ನಲ್ಲಿ ಕಟ್ಟಿದ್ದರು. ತಡರಾತ್ರಿ ಒಂದು ಗಂಟೆ ಸುಮಾರಿಗೆ ಬಂದಿರುವ ಚಿರತೆ, ಕೆಲಕಾಲ ಹೊಂಚು ಹಾಕಿ ನಂತರ ನಾಯಿ ಹೊತ್ತೊಯ್ಯಲು ಪ್ರಯತ್ನಪಟ್ಟಿದೆ. ಬಾಕ್ಸ್ ಗೆ ಚೈನ್ ನಿಂದ ನಾಯಿ ಕಟ್ಟಿಹಾಕಿದ್ದರಿಂದ ನಾಯಿಯನ್ನು ಎಳೆದೊಯ್ಯಲು ಹರಸಾಹಸಪಟ್ಟಿದೆ. ಕೊನೆಗೂ ಚಿರತೆ ನಾಯಿಯನ್ನು ಕಚ್ಚಿ ಬೈಕ್ ಮೇಲೆ ಹತ್ತಿ ಹೋಗಿದೆ.

ಬೈಕ್ ಕೆಳಕ್ಕೆ ಬಿದ್ದಿದೆ. ಚಿರತೆ ನಾಯಿಯನ್ನು ಹೊತ್ತೊಯ್ಯುವ ದೃಶ್ಯ ಸಿಸಿಟಿಯಲ್ಲಿ ಸೆರೆಯಾಗಿದೆ. ಸ್ಥಳಕ್ಕೆ ವಲಯ ಅರಣ್ಯಾಧಿಕಾರಿ ಪಲ್ಲವಿ ಭೇಟಿ ಪರಿಶೀಲನೆ ನಡೆಸಿದರು. ಬೆಳಗೊಳದ ವಿಂಧ್ಯಗಿರಿ, ಚಂದ್ರಗಿರಿ ಬೆಟ್ಟಗಳಲ್ಲಿ ಚಿರತೆಗಳು ಹೆಚ್ಚು ವಾಸಿಸುತ್ತಿದ್ದು, ರಾತ್ರಿ ವೇಳೆ ಗ್ರಾಮಕ್ಕೆ ನುಗ್ಗಿ ಬಂದು ನಾಯಿಗಳನ್ನು ಹೊತ್ತೊಯ್ದು ತಿಂದು ಹಾಕುತ್ತಿವೆ. ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಶ್ರವಣಬೆಳಗೊಳಕ್ಕೆ ಭೇಟಿ ನೀಡುತ್ತಾರೆ. ಆದ್ದರಿಂದ ಕೂಡಲೇ ಚಿರತೆಯನ್ನು ಸೆರೆ ಹಿಡಿಯುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ