ಕಂಬಳ ನೋಡಿ ವಾಪಸಾಗುತ್ತಿದ್ದ ಕಾರಿಗೆ ಲಾರಿ ಡಿಕ್ಕಿ: ಮಂಗಳೂರಿನ ಇಬ್ಬರ ದಾರುಣ ಸಾವು

Prasthutha|

ಕುಣಿಗಲ್: ಬೋರ್‌ವೆಲ್‌ ಲಾರಿ ಹಾಗೂ ಕಾರು ನಡುವೆ ನಡೆದ ಭೀಕರ ಅಪಘಾತಕ್ಕೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಂಗಳೂರು ಬಜಪೆ ಮೂಲದ ಕಿಶಾನ್‌ ಶೆಟ್ಟಿ (20) ದಕ್ಷಿಣ ಕನ್ನಡ ಜಿಲ್ಲೆ ಭಟ್ಟರ ತೋಟ ಗ್ರಾಮದ ಫಿಲಿಪ್‌ ನೇರಿ ಲೋಬೋ (32) ಮೃತರು. ಮೂರು ಮಂದಿ ಗಾಯಗೊಂಡಿದ್ದಾರೆ.

- Advertisement -

ರಾಜ್ಯ ಹೆದ್ದಾರಿ 33 ತಾಲೂಕಿನ ಕೊತ್ತಗೆರೆ ಹೋಬಳಿ ಚಿಗಣಿಪಾಳ್ಯ ಗ್ರಾಮದ ಬಳಿ ಬೆಳಿಗ್ಗೆ ಅಪಘಾತ ಸಂಭವಿಸಿದೆ. ಬೆಂಗಳೂರಿನಲ್ಲಿ ನಡೆಯುತ್ತಿರುವ ಕಂಬಳವನ್ನು ಕಣ್ತುಂಬಿಸಿಕೊಂಡು ವಾಪಸ್‌ ತಮ್ಮ ಊರಿಗೆ ಬರುವಾಗ ಕುಣಿಗಲ್‌ ಕಡೆಯಿಂದ ತುಮಕೂರು ಕಡೆಗೆ ಹೋಗುತ್ತಿದ್ದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ.

ಈ ಕುರಿತು ಕುಣಿಗಲ್‌ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.




Join Whatsapp