ವಿದೇಶಿ ಮಹಿಳೆಗೆ ಹುಟ್ಟಿದ ವ್ಯಕ್ತಿಯು ಎಂದಿಗೂ ದೇಶಭಕ್ತನಾಗಲು ಸಾಧ್ಯವಿಲ್ಲ: ರಾಹುಲ್ ವಿರುದ್ಧ ಬಿಜೆಪಿ ಸಂಸದ ವಿವಾದಾತ್ಮಕ ಹೇಳಿಕೆ

Prasthutha|

ನವದೆಹಲಿ: ಬಿಜೆಪಿ ಸಂಸದ ಸಂಜಯ್ ಜೈಸ್ವಾಲ್ ಅವರು ರಾಹುಲ್ ಗಾಂಧಿ ಅವರ ಮೋದಿ ಉಪನಾಮದ ವಿವಾದಾತ್ಮಕ ಹೇಳಿಕೆಯನ್ನು ವಿರೋಧಿಸಿ ಗಾಂಧಿ ಕುಟುಂಬದ ಮೇಲೆ ವೈಯಕ್ತಿಕ ದಾಳಿ ನಡೆಸುವ ಮೂಲಕ ಮತ್ತೆ ವಿವಾದ ಸೃಷ್ಟಿಸಿದ್ದಾರೆ.

- Advertisement -


“ವಿದೇಶಿ ಮಹಿಳೆಗೆ ಹುಟ್ಟಿದ ವ್ಯಕ್ತಿಯು ಎಂದಿಗೂ ದೇಶಭಕ್ತನಾಗಲು ಸಾಧ್ಯವಿಲ್ಲ” ಎಂದು ಜೈಸ್ವಾಲ್ ಹೇಳಿಕೆ ನೀಡಿದ್ದಾರೆ.


ಮಾರ್ಚ್ 11ರಂದು, ಬಿಜೆಪಿಯ ಮ್ತತೊಬ್ಬ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ಇದೇ ರೀತಿ ಹೇಳಿದ್ದರು. ನೀನು(ರಾಹುಲ್ ಗಾಂಧಿ) ಭಾರತದಿಂದ ಬಂದವನಲ್ಲ ಎಂದು ನಮಗೆ ಗೊತ್ತು. ವಿದೇಶಿ ಮಹಿಳೆಗೆ ಹುಟ್ಟಿದ ಮಗ ದೇಶಭಕ್ತನಾಗಲು ಸಾಧ್ಯವೇ ಇಲ್ಲ ಎಂದ ಚಾಣಕ್ಯ ಅವರ ಮಾತನ್ನು ರಾಹುಲ್ ಗಾಂಧಿ ಸಾಬೀತು ಮಾಡಿದ್ದಾರೆ ಎಂದು ಜೈಸ್ವಾಲ್ ಹೇಳಿದ್ದರು.
ಬಿಜೆಪಿ ಸಂಸದನ ಹೇಳಿಕೆಗೆ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.



Join Whatsapp