ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆಗೈದ ವ್ಯಕ್ತಿ; ಕಾರಣ ನಿಗೂಢ

Prasthutha|

ಚೆನ್ನೈ: ವ್ಯಕ್ತಿಯೊಬ್ಬ ತನ್ನ ಪತ್ನಿ ಮತ್ತು ನಾಲ್ವರು ಮಕ್ಕಳನ್ನು ಕೊಂದು ತಾನೂ ನೇಣಿಗೆ ಶರಣಾಗಿರುವ ಘಟನೆ ತಮಿಳುನಾಡಿನ ತಿರುವಣ್ಣಾಮಲೈ ಜಿಲ್ಲೆಯ ಚೆಂಗಂ ತಾಲೂಕಿನಲ್ಲಿ ನಡೆದಿದೆ.

- Advertisement -

ಕುಟುಂಬವನ್ನೇ ಕೊಂದ ವ್ಯಕ್ತಿಯನ್ನು 45 ವರ್ಷದ ಪಳನಿಸ್ವಾಮಿ ಎಂದು ಗುರುತಿಸಲಾಗಿದೆ. ಪೊಲೀಸರು ಮನೆಯ ಬಾಗಿಲು ತೆರೆದಾಗ ಪಳನಿಸ್ವಾಮಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತಪಟ್ಟಿರುವುದು, 37 ವರ್ಷದ ಹೆಂಡತಿ, ಮೂವರು ಹೆಣ್ಣುಮಕ್ಕಳು ಮತ್ತು ಒಬ್ಬ ಗಂಡು ಮಗ ಸಾವಿಗೀಡಾಗಿರುವುದು ಕಂಡುಬಂದಿದೆ.

ಮೃತಪಟ್ಟವರಲ್ಲಿ ಇಬ್ಬರು ಹೆಣ್ಣುಮಕ್ಕಳು ಹದಿಹರೆಯದವರಾಗಿದ್ದು, ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿರುವ 9 ವರ್ಷದ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪಳನಿಸ್ವಾಮಿ ಕೂಲಿ ಕೆಲಸ ಮಾಡುತ್ತಿದ್ದು, ಘಟನೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

Join Whatsapp