ಅರಕಲಗೂಡು ಕ್ಷೇತ್ರಕ್ಕೆ ಎ ಮಂಜು ಜೆಡಿಎಸ್ ಅಭ್ಯರ್ಥಿ: ಕುಮಾರಸ್ವಾಮಿ

Prasthutha|

ಬೆಂಗಳೂರು: ಹಾಸನ ಜಿಲ್ಲೆಯ ಅರಕಲಗೂಡು ಕ್ಷೇತ್ರದಿಂದ ಎ ಮಂಜು ಜೆಡಿಎಸ್ ಪಕ್ಷದಿಂದ ಅಭ್ಯರ್ಥಿ ಆಗಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಘೋಷಿಸಿದ್ದಾರೆ.

- Advertisement -


ಪಕ್ಷದ ಕಚೇರಿಯಲ್ಲಿ ಮಾತನಾಡಿದ ಅವರು, ಅರಕಲಗೂಡು ಕ್ಷೇತ್ರದಿಂದ ಮಂಜು ಅವರು ಜೆಡಿಎಸ್ ಅಭ್ಯರ್ಥಿ ಆಗಲಿದ್ದಾರೆ. ಈಗಾಗಲೇ ಮಂಜು ಜೊತೆ ಮಾತುಕತೆ ನಡೆದಿದ್ದು, ಬಹುತೇಕ ಅಂತಿಮ ಹಂತದಲ್ಲಿದೆ. ಎಟಿ ರಾಮಸ್ವಾಮಿ ಹಾಗೂ ಅರಸೀಕೆರೆ ಕ್ಷೇತ್ರದ ಶಾಸಕ ಶಿವಲಿಂಗೇಗೌಡರು ಕಳೆದ ಎರಡು ವರ್ಷಗಳಿಂದ ನಮ್ಮ ಸಭೆಯಲ್ಲಿ ಪಾಲ್ಗೊಳ್ಳುತ್ತಿಲ್ಲ. ಹಾಗಾಗಿ, ಅವರು ಯಾವ ನಿರ್ಧಾರ ತೆಗೆದುಕೊಂಡಿದ್ದಾರೋ ಗೊತ್ತಿಲ್ಲ ಎಂದು ಹೇಳಿದರು.

Join Whatsapp