ದತ್ತಪೀಠಕ್ಕೆ ಹೊರಟಿದ್ದ ಬಸ್‌ ಗೆ ಕಿಡಿಗೇಡಿಗಳಿಂದ ಕಲ್ಲು ತೂರಾಟ: ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ

Prasthutha|

ಕೋಲಾರ: ದತ್ತಪೀಠಕ್ಕೆ ಹೊರಟಿದ್ದ ಬಸ್ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿರುವ ಘಟನೆ ಕೋಲಾರದಲ್ಲಿ ನಡೆದಿದೆ.

- Advertisement -


ನಿನ್ನೆ ರಾತ್ರಿ ಹನ್ನೊಂದು ಗಂಟೆಯ ಸುಮಾರಿಗೆ ಕೋಲಾರದ ಶ್ರೀರಾಮ ಸೇನೆ ಕಾರ್ಯಕರ್ತರು ದತ್ತ ಮಾಲೆ ಧರಿಸಿ ದತ್ತ ಪೀಠಕ್ಕೆ ಒಂದು ಮಿನಿ ಬಸ್ ನಲ್ಲಿ ಹೊರಟಿದ್ದರು. ಈ ವೇಳೆ ಜೈ ಶ್ರೀರಾಮ್ ಘೋಷಣೆಗಳನ್ನು ಕೂಗುತ್ತಾ ದತ್ತ ಮಾಲಾಧಾರಿಗಳಿದ್ದ ಬಸ್ ಅದೇ ಮಾರ್ಗವಾಗಿ ತೆರಳುತ್ತಿತ್ತು. ಆಗ ಅಲ್ಲಿದ್ದ ಕೆಲವು ಕಿಡಿಗೇಡಿಗಳು ಇದ್ದಕ್ಕಿದಂತೆ ಬಸ್ ಮೇಲೆ ಕಲ್ಲು ತೂರಾಟ ನಡೆಸಿದರು. ಈ ಸಂದರ್ಭದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.


ಬಳಿಕ ವಿಷಯ ತಿಳಿದ ಕೋಲಾರ ನಗರ ಠಾಣಾ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿ ನಿಯಂತ್ರಿಸಿದರು. ಆದರೂ ಶ್ರೀರಾಮ ಸೇನೆ ಕಾರ್ಯಕರ್ತರು/ದತ್ತ ಮಾಲಾಧಾರಿಗಳು ಕೋಲಾರ ನಗರ ಠಾಣೆ ಎದುರು ಕಿಡಿಗೇಡಿಗಳನ್ನು ಬಂಧಿಸುವಂತೆ ಆಗ್ರಹಿಸಿ ಪ್ರತಿಭಟಿಸಿದರು.

Join Whatsapp