ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಶರಣಾದ ತಾಯಿ !

Prasthutha|

ಬೆಂಗಳೂರು: ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಬೆಂಗಳೂರು ಉತ್ತರ ತಾಲೂಕಿನ ಪ್ರಕೃತಿ ಬಡಾವಣೆಯ ಮನೆಯೊಂದರಲ್ಲಿ ನಡೆದಿದೆ.

- Advertisement -


40 ವರ್ಷದ ವಸಂತ ಎಂಬಾಕೆ ತನ್ನ 13 ವರ್ಷದ ಯಶ್ವಂತ್, 6 ವರ್ಷದ ನಿಶ್ಚಿತಾ ಎಂಬ ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.


ವಸಂತ ಎಂಬಾಕೆ ತನ್ನ ಇಬ್ಬರು ಮಕ್ಕಳ ಸಹಿತ ಪ್ರಕೃತಿ ಲೇಔಟ್ ನ ಮನೆಯಲ್ಲಿನ ಒಂದೇ ಪ್ಯಾನ್ ಗೆ ನೇಣು ಬಿಗಿದುಕೊಂಡು ನಿನ್ನೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ವಸಂತ ಪತಿ ಕೋರೊನಾ ದಿಂದ ಇತ್ತೀಚೆಗೆ ಸಾವನ್ನಪ್ಪಿದ್ದರು. ಈ ಮೂಲಕ ಗಂಡ ಇಲ್ಲದೆ ಜೀವನ ಇಲ್ಲ ಎಂದು ಸಂಬಂಧಿಕರಿಗೆ ಹೇಳುತ್ತಿದ್ದ ವಸಂತ ಮೊದಲು ತನ್ನ ಇಬ್ಬರು ಮಕ್ಕಳನ್ನು ಕೊಂದು ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿದ್ದಾರೆ.

- Advertisement -


ವಿಷಯ ತಿಳಿದು ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸರು ಆಗಮಿಸಿ, ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.



Join Whatsapp