Home ಟಾಪ್ ಸುದ್ದಿಗಳು ವಿಶ್ವದ ಅತಿ ದೊಡ್ಡ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ದಾನ ಮಾಡಿದ ಮುಸ್ಲಿಂ ಕುಟುಂಬ

ವಿಶ್ವದ ಅತಿ ದೊಡ್ಡ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ದಾನ ಮಾಡಿದ ಮುಸ್ಲಿಂ ಕುಟುಂಬ

ಪಾಟ್ನಾ: ಬಿಹಾರದ ಮುಸ್ಲಿಮ್ ಕುಟುಂಬವೊಂದು ರಾಜ್ಯದ ಪೂರ್ವ ಚಂಪಾರಣ್ ಜಿಲ್ಲೆಯ ಕೈತ್ವಾಲಿಯಾ ಪ್ರದೇಶದಲ್ಲಿ ವಿಶ್ವದ ಅತಿ ದೊಡ್ಡ ಹಿಂದೂ ದೇವಾಲಯ-ವಿರಾಟ್ ರಾಮಾಯಣ ಮಂದಿರ ನಿರ್ಮಾಣಕ್ಕೆ ರೂ.2.5 ಕೋಟಿ ಮೌಲ್ಯದ ಭೂಮಿಯನ್ನು ದಾನ ಮಾಡಿದೆ.

ಗುವಾಹಟಿ ಮೂಲದ ಪೂರ್ವ ಚಂಪಾರಣ್ ನ ಉದ್ಯಮಿ ಇಶ್ತಿಯಾಕ್ ಅಹ್ಮದ್ ಖಾನ್ ಭೂಮಿಯನ್ನು ದಾನ ಮಾಡಿದ್ದು, ಪಾಟ್ನಾ ಮೂಲದ ಮಹಾವೀರ ಮಂದಿರ ಟ್ರಸ್ಟ್ ನ ಮುಖ್ಯಸ್ಥ ಆಚಾರ್ಯ ಕಿಶೋರ್ ಕುನಾಲ್ ಈ ಯೋಜನೆಯನ್ನು ಕೈಗೆತ್ತಿಕೊಂಡಿದ್ದಾರೆ.

ಖಾನ್ ಮತ್ತು ಅವರ ಕುಟುಂಬದವರ ಈ ದೇಣಿಗೆ ಎರಡು ಸಮುದಾಯಗಳ ನಡುವಿನ ಸಾಮಾಜಿಕ ಸಾಮರಸ್ಯ ಮತ್ತು ಸಹೋದರತ್ವಕ್ಕೆ ಉತ್ತಮ ಉದಾಹರಣೆ ಎಂದು ಬಣ್ಣಿಸಲಾಗಿದೆ. ಮುಸ್ಲಿಮರ ಸಹಾಯವಿಲ್ಲದಿದ್ದರೆ ಈ ಕನಸಿನ ಯೋಜನೆ ಸಾಕಾರಗೊಳ್ಳುವುದು ಕಷ್ಟಸಾಧ್ಯ ಎಂದು ಆಚಾರ್ಯ ಹೇಳಿದ್ದಾರೆ.

“ಅವರು ಇತ್ತೀಚೆಗೆ ಕೇಶರಿಯಾ ಉಪವಿಭಾಗದ (ಪೂರ್ವ ಚಂಪಾರಣ್) ರಿಜಿಸ್ಟ್ರಾರ್ ಕಚೇರಿಯಲ್ಲಿ ದೇವಾಲಯದ ನಿರ್ಮಾಣಕ್ಕಾಗಿ ತಮ್ಮ ಕುಟುಂಬಕ್ಕೆ ಸೇರಿದ ಭೂಮಿಯನ್ನು ದಾನಕ್ಕೆ ಸಂಬಂಧಿಸಿದ ಎಲ್ಲಾ ವಿಧಿವಿಧಾನಗಳನ್ನು ಪೂರ್ಣಗೊಳಿಸಿದ್ದಾರೆ” ಎಂದು ಮಾಜಿ ಭಾರತೀಯ ಪೊಲೀಸ್ ಸೇವಾ ಅಧಿಕಾರಿ ಕುನಾಲ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

Join Whatsapp
Exit mobile version