ಕುರ್’ಆನ್ ತಿದ್ದುಪಡಿ ಮಾಡಲು ಯಾರಿಗೂ ಸಾಧ್ಯವಿಲ್ಲ : ಎ ಪಿ ಅಬೂಬಕ್ಕರ್ ಮುಸ್ಲಿಯಾರ್

Prasthutha: March 16, 2021

ಕುರ್’ಆನ್‌ನ ಕೆಲವು ವಚನಗಳನ್ನು ತೆಗೆದುಹಾಕುವಂತೆ ಕೋರಿ ಉತ್ತರ ಪ್ರದೇಶದ ಶಿಯಾ ವಕ್ಫ್ ಮಂಡಳಿಯ ಮಾಜಿ ಅಧ್ಯಕ್ಷ ವಸೀಮ್ ರಿಝ್ವಿ ಸುಪ್ರೀಂ ಕೋರ್ಟ್‌ ಮೊರೆಹೋಗಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿರುವ ಸುನ್ನೀ ಜಮೀಯ್ಯತುಲ್ ಉಲಮಾದ ಪ್ರಧಾನ ಕಾರ್ಯದರ್ಶಿ ಕಾಂತಪುರಂ ಎ ಪಿ ಅಬೂಬಕ್ಕರ್ ಮುಸ್ಲಿಯಾರ್, “ಯಾರಿಗೂ ಕೂಡ ಕುರಾನ್ ತಿದ್ದುಪಡಿ ಮಾಡಲು ಅವಕಾಶವಿಲ್ಲ . ಆ ಅಧಿಕಾರ ಅಲ್ಲಾಹನ ಹೊರತು ಬೇರೆ ಯಾರಿಗೂ ಇಲ್ಲ” ಎಂದು ಹೇಳಿದ್ದಾರೆ.

ಮಂಗಳೂರಿನ ಕಾರ್ಕಳ ಸಮೀಪದ ಬಂಗ್ಲೆಗುಡ್ಡೆ ತೈಬಾ ಗಾರ್ಡನ್ ನಲ್ಲಿ ಮಾತನಾಡಿದ ಅವರು ಕುರ್’ಆನ್ ಎಂಬುದು ಇಸ್ಲಾಂ ಧರ್ಮದ ಆಶಯಗಳನ್ನು ಜಗತ್ತಿಗೆ ತಿಳಿಸಲು ಅವತೀರ್ಣಗೊಂಡ ಪರಿಪೂರ್ಣ ಕೃತಿ. ಮನುಷ್ಯರಿಂದ ಅದರ ಮೇಲಿನ ದಾಳಿ ಅಥವಾ ತಿದ್ದುವಿಕೆ ಅಸಾಧ್ಯವಾದುದು. ಅಂತಹಾ ಪ್ರಯತ್ನಗಳು ಇದುವರೆಗೆ ವಿಫಲವಾಗಿದೆ ಎಂದು ಎ.ಪಿ ಅಬೂಬಕ್ಕರ್ ಮುಸ್ಲಿಯಾರ್ ಹೇಳಿದ್ದಾರೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!