Home ಟಾಪ್ ಸುದ್ದಿಗಳು ಮದುವೆಗೆ ಒಪ್ಪದ ಹುಡುಗಿಯ ರುಂಡ ಕಡಿದು ಪೊಲೀಸ್ ಠಾಣೆಗೆ ತಂದ ವಿಕೃತ ಪ್ರೇಮಿ

ಮದುವೆಗೆ ಒಪ್ಪದ ಹುಡುಗಿಯ ರುಂಡ ಕಡಿದು ಪೊಲೀಸ್ ಠಾಣೆಗೆ ತಂದ ವಿಕೃತ ಪ್ರೇಮಿ

ವಿಜಯನಗರ: ಪ್ರೀತಿಸಿದ ಹುಡುಗಿಯ ಜೊತೆ ಮದುವೆಯಾಗಲು ಆಗದ ಕಾರಣಕ್ಕೆ ವಿಕೃತ ಪ್ರೇಮಿಯೊಬ್ಬ ಆಕೆಯ ತಲೆ ಕಡಿದುದಲ್ಲದೆ, ಆ ರುಂಡವನ್ನು ಕೈಯಲ್ಲಿ ಹಿಡಿದು ಪೊಲೀಸ್ ಠಾಣೆಗೆ ಬಂದ ಭೀಕರ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕನ್ನಬೋರನಯ್ಯನ ಹಟ್ಟಿಯಲ್ಲಿ ನಡೆದಿದೆ.


ನಿರ್ಮಲಾ (23 ) ಭೀಕರವಾಗಿ ಹತ್ಯೆಯಾದ ಯುವತಿ. ವಿಕೃತ ಕೃತ್ಯ ಎಸಗಿದ ವ್ಯಕ್ತಿ ಭೋಜರಾಜ.


ನಿರ್ಮಲಾಳನ್ನು ಭೋಜರಾಜ ಪ್ರೀತಿಸುತ್ತಿದ್ದ. ನಿರ್ಮಲಾಳನ್ನು ಮದುವೆ ಮಾಡಿಕೊಂಡುವಂತೆ ಈ ಮೊದಲು ಆಕೆಯ ಪೋಷಕರಲ್ಲಿ ಈತ ಕೇಳಿದ್ದ. ಆದರೆ ಆಕೆಯ ಮನೆಯವರು ಒಪ್ಪಿರಲಿಲ್ಲ ಎನ್ನಲಾಗಿದೆ.


ಈ ಹಿನ್ನೆಲೆಯಲ್ಲಿ ಬೇರೊಬ್ಬಳನ್ನು ಎರಡು ತಿಂಗಳ ಹಿಂದೆ ಮದುವೆಯಾಗಿದ್ದ ಭೋಜರಾಜ. ಆದರೆ ನಿರ್ಮಲಾಳ ಮೇಲೆ ಸೇಡು ತೀರಿಸಿಕೊಳ್ಳಲು ಕಾಯುತ್ತಿದ್ದ. ಬೇರೊಂದು ಊರಿನಲ್ಲಿ ಬಿಎಸ್ಸಿ ನರ್ಸಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದ ನಿರ್ಮಲಾ, ಪರೀಕ್ಷೆಗಾಗಿ ಓದಲು ಊರಿಗೆ ಬಂದಿದ್ದಳು. ಇದೇ ಸಮಯಕ್ಕೆ ಕಾಯುತ್ತಿದ್ದ ಭೋಜರಾಜ, ಆಕೆಯ ತಲೆ ಕಡಿದು ರುಂಡದೊಂದಿಗೆ ಠಾಣೆಗೆ ಬಂದು ಶರಣಾಗಿದ್ದಾನೆ.


ಈ ಕೃತ್ಯ ಜನರನ್ನು ಬೆಚ್ಚಿಬೀಳಿಸಿದ್ದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

Join Whatsapp
Exit mobile version