ನವದೆಹಲಿ: ಪೊಲೀಸ್ ಅಧಿಕಾರಿಯೊಬ್ಬರು ರಸ್ತೆಯಲ್ಲಿ ನಮಾಜ್ ಮಾಡುತ್ತಿದ್ದ ಮುಸ್ಲಿಂ ವ್ಯಕ್ತಿಗಳನ್ನು ಒದ್ದು ಕಳಿಸಿರುವ ವಿಡಿಯೋ ವೈರಲ್ ಆದ ಬೆನ್ನಲ್ಲಿಯೇ ಪೊಲೀಸ್ ಅನ್ನು ಅಮಾನತು ಮಾಡಲಾಗಿದೆ.
ನವದೆಹಲಿಯ ಇಂದರ್‌ಲೋಕ್ ಪ್ರದೇಶದಲ್ಲಿ ಈ ಘಟನೆ ನಡೆದಿತ್ತು. ಇದರ ವೀಡಿಯೊ ವೈರಲ್ ಆಗಿತ್ತು.
ಘಟನೆಯ ಕುರಿತಾಗಿ ತನಿಖೆಗೆ ಆದೇಶ ನೀಡಲಾಗಿದ್ದು, ಸೂಕ್ತ ಕ್ರಮವನ್ನು ಕೈಗೊಳ್ಳಲಾಗುವುದು ಎಂದು ದೆಹಲಿಯ ಉತ್ತರ ವಿಭಾಗದ ಡಿಸಿಪಿ ತಿಳಿಸಿದ್ದಾರೆ.
ವೈರಲ್ ವಿಡಿಯೋದಲ್ಲಿ ಕೆಲವು ವ್ಯಕ್ತಿಗಳು ಕೆಲ ಹೊತ್ತಿನ ಮಟ್ಟಿಗೆ ರಸ್ತೆಯಲ್ಲಿ ನಮಾಜ್ ಮಾಡಲು ಆರಂಭಿಸಿದ್ದಾರೆ. ಈ ಹಂತದಲ್ಲಿ ಅಲ್ಲಿಗೆ ಬಂದ ಪೊಲೀಸ್ ಅಧಿಕಾರಿ, ನಮಾಜ್ ಮಾಡುತ್ತಿದ್ದ ವ್ಯಕ್ತಿಗಳನ್ನು ಕಾಲಿನಿಂದ ಒದ್ದಿದ್ದಾರೆ.
ಈ ವೇಲೆ ಅಲ್ಲಿದ್ದ ಒಬ್ಬ ವ್ಯಕ್ತಿ ಇಡೀ ಘಟನೆಯನ್ನು ವಿಡಿಯೋ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವಿರೋಧ ವ್ಯಕ್ತವಾಗುತ್ತಿದ್ದಂತೆ ಎಚ್ಚೆತ್ತುಕೊಂಡ ದೆಹಲಿ ಪೊಲೀಸರು ಅಧಿಕಾರಿಯನ್ನು ತಕ್ಷಣಕ್ಕೆ ಜಾರಿ ಬರುವಂತೆ ಅಮಾನತು ಮಾಡಿದ್ದಾರೆ.