ಉ.ಪ್ರದೇಶ: ಪ್ಯಾಲೆಸ್ತೀನ್ ಧ್ವಜ ಪ್ರದರ್ಶಿಸಿದ ವ್ಯಕ್ತಿಯ ಬಂಧನ

Prasthutha|

ಭದೋಹಿ: ಪ್ಯಾಲೆಸ್ತೀನ್ ಧ್ವಜ ಪ್ರದರ್ಶಿಸಿದ ವ್ಯಕ್ತಿಯನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ.

- Advertisement -

ಸಾಹಿಲ್‌ ಅಲಿಯಾಸ್ ಬಾದ್‌ಶಾ ಬಂಧಿತ ವ್ಯಕ್ತಿ.

ಮೊಹರಂ ತಿಂಗಳ ಚಂದ್ರ ದರ್ಶನದ ಬಳಿಕ ನಡೆದ ಮೆರವಣಿಗೆಯಲ್ಲಿ ಪ್ಯಾಲೆಸ್ತೀನ್ ಧ್ವಜ ಪ್ರದರ್ಶಿಸಿದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ವ್ಯಕ್ತಿಯೊಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

ಕೆಲ ಯುವಕರು ಅನುಮತಿ ಪಡೆಯದೆ ಮಾಧೋಸಿಂಗ್‌ ಪ್ರದೇಶದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ರಾತ್ರಿ ಮೆರವಣಿಗೆ ನಡೆಸಿದ್ದರು. ಈ ವೇಳೆ ಪ್ಯಾಲೆಸ್ತೀನ್ ಧ್ವಜ ಪ್ರದರ್ಶಿಸಲಾಗಿತ್ತು. ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಲಾಗಿತ್ತುಎಂದು ಔರಾಯಿ ಪೊಲೀಸ್‌ ಠಾಣೆಯ ಎಸ್‌ಎಚ್‌ಒ ಸಚ್ಚಿದಾನಂದ ಪಾಂಡೆ ಹೇಳಿದ್ದಾರೆ.

‘ವಿಡಿಯೊ ಜಾಲತಾಣಗಳಲ್ಲಿ ಹರಿದಾಡಿದ ಬೆನ್ನಲ್ಲೇ ತನಿಖೆ ಚುರುಕುಗೊಳಿಸಿ, ಸಾಹಿಲ್‌ ಅಲಿಯಾಸ್ ಬಾದ್‌ಶಾ ಮತ್ತು ಗೋರಖ್‌ ಎಂಬವರನ್ನು ಆರೋಪಿಗಳೆಂದು ಗುರುತಿಸಲಾಯಿತು. ಸಾಹಿಲ್ ಅವರನ್ನು ಸೋಮವಾರ ರಾತ್ರಿ ಬಂಧಿಸಲಾಗಿದೆ. ಗೋರಖ್‌ ಅವರ ಪತ್ತೆಗೆ ಶೋಧ ನಡೆಸಲಾಗುತ್ತಿದೆ’ ಎಂದರು.



Join Whatsapp