ಕೇರಳದಿಂದ ಕರ್ನಾಟಕಕ್ಕೆ ಬರುವವರಿಗೆ ಏಳು ದಿನಗಳ ಕ್ವಾರಂಟೈನ್ ಕಡ್ಡಾಯ

Prasthutha|

ಬೆಂಗಳೂರು: ಕೇರಳದಿಂದ ಕರ್ನಾಟಕ ಪ್ರವೇಶಿಸುವ ಜನರು ಕರೋನ ಲಸಿಕೆ ಪಡೆದರೂ ಕೂಡ ಒಂದು ವಾರ ಸಾಂಸ್ಥಿಕ ಕ್ವಾರಂಟೈನ್ ನಲ್ಲಿರಬೇಕಾಗುತ್ತದೆ ಮತ್ತು ನೆಗೆಟಿವ್ ಆರ್ ಟಿ-ಪಿಸಿಆರ್ ಪರೀಕ್ಷಾ ವರದಿಯನ್ನು ಹೊಂದಿರಬೇಕು ಎಂದು ಕರ್ನಾಟಕ ಆರೋಗ್ಯ ಸಚಿವ ಕೆ.ಸುಧಾಕರ್ ಮಾಹಿತಿ ನೀಡಿದ್ದಾರೆ.

ಇದೇ ವೇಳೆ ಮಾತನಾಡಿ ಅವರು, ಕೇರಳದ ಗಡಿಯಲ್ಲಿರುವ ದಕ್ಷಿಣ ಕನ್ನಡ, ಉಡುಪಿ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಕೋವಿಡ್ ತಡೆಗಟ್ಟುವ ಅಭಿಯಾನವನ್ನು ಮತ್ತಷ್ಟು ಬಲಪಡಿಸುವುದು ಹೇಗೆ ಎಂಬುದರ ಬಗ್ಗೆ ತಜ್ಞರೊಂದಿಗೆ ಸಮಾಲೋಚಿಸಿ ಸರ್ಕಾರ ಕಾರ್ಯತಂತ್ರವನ್ನು ರೂಪಿಸಲಾಗುತ್ತಿದೆ ಅಂತ ಹೇಳಿದರು.

- Advertisement -