ಗರಿಯಾಬಂದ್: ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ವಿಶೇಷ ಸಶಸ್ತ್ರ ಪಡೆಯ ಯೋಧನೊಬ್ಬ ತನ್ನ ಸರ್ವಿಸ್ ರೈಫಲ್ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಛತ್ತೀಸ್ಗಢದ ಗರಿಯಾಬಂದ್ ಜಿಲ್ಲೆಯಲ್ಲಿ ನಡೆದಿದೆ.
ಮಧ್ಯಪ್ರದೇಶದ ವಿಶೇಷ ಸಶಸ್ತ್ರ ಪಡೆಯ 34ನೇ ಬೆಟಾಲಿಯನ್ಗೆ ಸೇರಿದ ಹೆಡೆ ಕಾನ್ಸ್ಟೆಬಲ್ ಜಿಯಾಲಾಲ್ ಪವಾರ್ ಮೃತರು.
ಗರಿಯಾಬಂದ್ ಮಹಾಸಮುಂಡ್ ಲೋಕಸಭಾ ಕ್ಷೇತ್ರದಲ್ಲಿ ಎರಡನೇ ಹಂತದ ಸಾರ್ವತ್ರಿಕ ಚುನಾವಣೆಗೆ ಮತದಾನ ನಡೆಯುತ್ತಿದ್ದಾಗ ಪಿಪಾರ್ಚೇಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕುಡೆದದಾರ್ ಗ್ರಾಮದ ಸರ್ಕಾರಿ ಶಾಲೆಯ ಕೊಠಡಿಯೊಂದರಲ್ಲಿ ಬೆಳಿಗ್ಗೆ 9.30 ರ ಸುಮಾರಿಗೆ ಸೈನಿಕ ಜಿಯಾಲಾಲ್ ರೈಫಲ್ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸೈನಿಕ ಜಿಯಾಲಾಲ್ ಅವರು ಚುನಾವಣಾ ಕರ್ತವ್ಯಕ್ಕೆ ಭದ್ರತಾ ಸಿಬ್ಬಂದಿಯ ತಂಡದಲ್ಲಿದ್ದರು. ಅವರನ್ನು ಮೀಸಲು ತಂಡದಲ್ಲಿರಿಸಲಾಗಿತ್ತು.
ಮಾಹಿತಿ ತಿಳಿದ ಕೂಡಲೇ ಪೊಲೀಸ್ ತಂಡ ಸ್ಥಳಕ್ಕೆ ಆಗಮಿಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಪತ್ತೆಯಾಗಿಲ್ಲ, ತನಿಖೆ ನಡೆಯುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.