ಯುವಕರಿಗೆ ಉದ್ಯೋಗ ಕೊಡದೇ ಬಲಿಷ್ಠ ಭಾರತದ ನಿರ್ಮಾಣವಾಗದು: ಕೇಜ್ರಿವಾಲ್

Prasthutha|

ನವದೆಹಲಿ: ಪ್ರತಿಯೊಬ್ಬ ನಿರುದ್ಯೋಗಿ ಯುವಕರಿಗೆ ಉದ್ಯೋಗ ಕೊಡದೇ ಬಲಿಷ್ಠ ಭಾರತ ನಿರ್ಮಾಣವಾಗದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ.

- Advertisement -


ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿ ಗ್ರಾಮಕ್ಕೆ ರಸ್ತೆ ಸಂಪರ್ಕ, ಪ್ರತಿ ಮನೆಗೆ ವಿದ್ಯುತ್ ಮತ್ತು ನೀರು ಸರಬರಾಜು ಮಾಡುವುದು ಸಹ ಮುಖ್ಯವಾಗಿದೆ. ಇದಲ್ಲದೆ ಪ್ರತಿಯೊಬ್ಬ ನಿರುದ್ಯೋಗಿ ಯುವಕರಿಗೆ ನಾವು ಗೌರವಯುತ ಉದ್ಯೋಗಾವಕಾಶ ಒದಗಿಸಬೇಕು. ಮಹಿಳೆಯರು ಅಭಿವೃದ್ಧಿ ಹೊಂದಲು ನಾವು ಈ ಸಮಾಜವನ್ನು ಸುರಕ್ಷಿತಗೊಳಿಸಬೇಕಾಗಿದೆ. ನಾವು ಇದನ್ನು ಸಾಧಿಸದ ಹೊರತು, ನಾವು ಬಲಿಷ್ಠ ರಾಷ್ಟ್ರಕ್ಕಾಗಿ ಭರವಸೆ ನೀಡಲು ಸಾಧ್ಯವಾಗುವುದಿಲ್ಲ ಎಂದರು.

ಆಗಸ್ಟ್ 14 ರಂದು ನಗರದ ನೂರಕ್ಕೂ ಅಧಿಕ ಸ್ಥಳಗಳಲ್ಲಿ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದ್ದು, ಅಂದು ಸಂಜೆ 5 ಗಂಟೆಗೆ ಧ್ವಜ ಹಿಡಿದು ರಾಷ್ಟ್ರಗೀತೆ ಹಾಡಿ ಭಾರತವನ್ನು `ವಿಶ್ವದ ಅತ್ಯುತ್ತಮ ದೇಶ’ ಮಾಡುವುದಾಗಿ ಪ್ರತಿಜ್ಞೆ ತೆಗೆದುಕೊಳ್ಳುವಂತೆ ಜನರಿಗೆ ಮನವಿ ಮಾಡಿದ್ದಾರೆ.

Join Whatsapp