ಈಜಲು ಹೋದ ಎಸ್ಎಸ್ಎಲ್‌ಸಿ ವಿದ್ಯಾರ್ಥಿ ಕೆರೆಪಾಲು‌

Prasthutha|

ಬೆಂಗಳೂರು: ಕೆರೆಯಲ್ಲಿ ಈಜಲು ಹೋಗಿ ಎಸ್ಎಸ್ಎಲ್‌ಸಿ ವಿದ್ಯಾರ್ಥಿಯೊಬ್ಬ ನೀರುಪಾಲಾದ ಘಟನೆ ಚಿಕ್ಕಬಳ್ಳಾಪುರ
ಜಿಲ್ಲೆಯ ಗುಡಿಬಂಡೆ ತಾಲೂಕಿನ ಗರುಡಾಚಾರ್ಲಹಳ್ಳಿ ಕೆರೆಯಲ್ಲಿ ನಡೆದಿದೆ. ಪಸುಪಲೋಡು ಗ್ರಾಮದ ಅಜಯ್ ಕುಮಾರ್ ಮೃತ ವಿದ್ಯಾರ್ಥಿ.

- Advertisement -

ಅಜಯ್ ಮಾಚಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ 10ನೇ ತರಗತಿ ವಿದ್ಯಾಭ್ಯಾಸ ಮಾಡುತ್ತಿದ್ದ. ಎಂದಿನಂತೆ ನಿನ್ನೆ ಶಾಲೆ ಮುಗಿಸಿಕೊಂಡು ಸ್ನೇಹಿತರೊಂದಿಗೆ ಕೆರೆಗೆ ಈಜಲು ಹೋಗಿ ನೀರಿನಲ್ಲಿ ಸಿಲುಕಿಕೊಂಡಿದ್ದಾನೆ.

ಇದನ್ನು ಗಮನಿಸಿದ ಸ್ಥಳೀಯರು ರಕ್ಷಣೆಗೆ ಧಾವಿಸಿದ್ದು, ಕೂಡಲೇ ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ.ಆದರೆ ಚಿಕಿತ್ಸೆ ಫಲಕಾರಿಯಾಗದೇ ಅಜಯ್ ಮೃತಪಟ್ಟಿದ್ದಾನೆ.

- Advertisement -

ಮೃತ ಅಜಯ್ ಚಿಕ್ಕ ವಯಸ್ಸಿನಲ್ಲಿ ತಂದೆಯನ್ನು ಕಳೆದುಕೊಂಡಿದ್ದ. ತಾಯಿ ಶಾರದಮ್ಮಗೆ ಒಬ್ಬನೇ ಮಗ. ಮಗನನ್ನು ಕಳೆದುಕೊಂಡ ತಾಯಿಯ ಆಕ್ರಂದನ ಮುಗಿಲು ಮುಟ್ಟಿದೆ. ಗುಡಿಬಂಡೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ‌.

Join Whatsapp