ಭೀಕರ ಅಪಘಾತ | ಮೂವರು ಸ್ಥಳದಲ್ಲೇ ಸಾವು, ಐವರು ಗಂಭೀರ

Prasthutha|

ಮಧ್ಯಪ್ರದೇಶ: ಟ್ರ್ಯಾಕ್ಟರ್’ಗಳನ್ನು ಹೊತ್ತೊಯ್ಯುತ್ತಿದ್ದ ಟ್ರಕ್ ಒಂದಕ್ಕೆ ಹಿಂದಿನಿಂದ ಕಾರೊಂದು ಡಿಕ್ಕಿಯಾದ ಪರಿಣಾಮ ಮೂವರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಸೆಹೋರ್ ಜಿಲ್ಲೆಯ ಭೋಪಾಲ್-ಇಂದೋರ್ ಹೆದ್ದಾರಿಯಲ್ಲಿ ಶುಕ್ರವಾರ ನಡೆದಿದೆ.
ಘಟನೆಯಲ್ಲಿ ಆರು ಮಂದಿ ಗಾಯಗೊಂಡಿದ್ದು, ಇವರಲ್ಲಿ ಐವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

ಅಪಘಾತದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದ್ದು, ಟ್ರಕ್ ಹಿಂಬದಿಯ ಅಡಿಭಾಗದಲ್ಲಿ ಸಿಲುಕಿಹಾಕಿಕೊಂಡಿತ್ತು. ಮಾಹಿತಿ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು, ಸ್ಥಳೀಯರ ನೆರವಿನೊಂದಿಗೆ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಬಳಿಕ ಗಂಭೀರ ಗಾಯಗೊಂಡವರನ್ನು ಕೂಡಲೇ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ನತಧೃಷ್ಟ ಕಾರಿನಲ್ಲಿದ್ದವರು ಗುಜರಾತ್‌ನ ಅಹಮದಾಬಾದ್ ನಿವಾಸಿಗಳಾಗಿದ್ದು, ಸಮಾರಂಭವೊಂದರಲ್ಲಿ ಪಾಲ್ಗೊಳ್ಳಲು ಇಂದೋರ್‌ಗೆ ಬಂದಿದ್ದರು. ಅಲ್ಲಿಂದ ಕುಬರೇಶ್ವರ ಧಾಮಕ್ಕೆ ಪ್ರವಾಸ ಕೈಗೊಳ್ಳುತ್ತಿದ್ದ ವೇಳೆ ಅವಘಡ ಸಂಭವಿಸಿದೆ.

Join Whatsapp