ಒಟ್ಟು 20 ಶಾಸಕರು ಸಂಪರ್ಕದಲ್ಲಿದ್ದಾರೆ: ಸತೀಶ್​ ಜಾರಕಿಹೊಳಿ

Prasthutha|

ಚಾಮರಾಜನಗರ: ಒಟ್ಟು 20 ಶಾಸಕರು ಸಂಪರ್ಕದಲ್ಲಿದ್ದಾರೆ ಎಂದು ಸಚಿವ ಸತೀಶ್​ ಜಾರಕಿಹೊಳಿ ಹೇಳಿದ್ದಾರೆ.

- Advertisement -

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರಿಂದ ನಮಗೆ ಭಯ ಇದೆ. 24 ಗಂಟೆಯೂ ನಾವು ಎಚ್ಚರದಿಂದ ಇರಬೇಕು. ಪಕ್ಷದ ತತ್ವ ಸಿದ್ದಾಂತಕ್ಕೆ ಒಪ್ಪಿ ಬರುವವರು ಖಂಡಿತ ಬರಬಹುದು. ಸಹೋದರ ರಮೇಶ್ ಜಾರಕಿಹೊಳಿಯನ್ನು ಮತ್ತೆ ವಾಪಸ್ಸು ಕಾಂಗ್ರೆಸ್​​ಗೆ ಕರೆತರುವ ವಿಚಾರವಾಗಿ ಮಾತನಾಡಿದ ಅವರು, ನನಗೆ ಆ ಕುರಿತು ತಿಳಿದಿಲ್ಲ ಪಕ್ಷದ ಹಿರಿಯರು ಏನು ಹೇಳುತ್ತಾರೆ ಅದಕ್ಕೆ ನಾವು ಬದ್ಧ ಎಂದರು.

Join Whatsapp