ಬೈಕ್ ಸ್ಕಿಡ್ ಆಗಿ ರಸ್ತೆಗೆಸೆಯಲ್ಪಟ್ಟ ಯುವಕನ ಮೈಮೇಲೆ ಹರಿದ ಟ್ಯ್ರಾಕ್ಟರ್; ಸ್ಥಳದಲ್ಲೇ ಸಾವು

Prasthutha|

ಮೂಡಿಗೆರೆ: ಬೈಕ್ ಸ್ಕಿಡ್ ಆಗಿ ಮಗುಚಿ ಬಿದ್ದ ವೇಳೆ ಟ್ರ್ಯಾಕ್ಟರ್ ಮೈಮೇಲೆ ಹರಿದು ಬೈಕ್ ಸವಾರ ದಾರುಣವಾಗಿ ಮೃತಪಟ್ಟ ಘಟನೆ ಆಲ್ಲೂರು ಸಮೀಪ ವಸ್ತಾರೆ ಎಂಬಲ್ಲಿ ನಡೆದಿದೆ.

- Advertisement -


ಚಾರ್ಮಾಡಿ ಬೀಟಿಗೆ ನಿವಾಸಿ ಸುಲೈಮಾನ್ (35) ಎಂಬವರು ಮೃತ ವ್ಯಕ್ತಿ. ಘಟನೆಯಲ್ಲಿ ಸಹಸವಾರ ಅಶ್ರಫ್ ಅವರಿಗೆ ಗಂಭೀರ ಗಾಯಗಳಾಗಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.


ಮೃತ ಸುಲೈಮಾನ್ ಮೇಸ್ತ್ರಿ ಕೆಲಸ ಮಾಡಿಕೊಂಡಿದ್ದು, ಚಿಕ್ಕಮಗಳೂರಿನ ಸಹೋದರಿಯ ಮನೆಗೆ ಕೆಲಸದ ನಿಮಿತ್ತ ಪ್ರಯಾಣಿಸುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.

Join Whatsapp