ಮಗುವಿಗೆ ಜನ್ಮ ನೀಡಿದ ಕೇರಳದ ತೃತೀಯ ಲಿಂಗಿ ದಂಪತಿ

Prasthutha|

ಕೋಯಿಕ್ಕೋಡ್: ಮೂರು ವರ್ಷಗಳಿಂದ ಲಿವಿಂಗ್ ಟುಗೆದರ್’ನಲ್ಲಿದ್ದ ಕೇರಳದ ಕೋಯಿಕ್ಕೋಡ್’ನ ತೃತೀಯಲಿಂಗಿಗಳಾದ ಜಿಯಾ ಮತ್ತು ಸಹದ್ ಅವರಿಗೆ ಪ್ರಥಮ ಮಗು ಜನಿಸಿದೆ. ಇದು ದೇಶದ ಇತಿಹಾಸದಲ್ಲಿಯೇ ಇದು ಮೊದಲ ಪ್ರಕರಣ ಎನ್ನಲಾಗಿದೆ.

- Advertisement -


ಬುಧವಾರ ಬೆಳಗ್ಗೆ 9.30ರ ಸುಮಾರಿಗೆ ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಸಿಸೇರಿಯನ್ ಮೂಲಕ ಮಗು ಜನಿಸಿದೆ ಎಂದು ತೃತೀಯಲಿಂಗಿ ದಂಪತಿಗಳಲ್ಲಿ ಒಬ್ಬರಾದ ಜಿಯಾ ಪಾವಲ್ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಮಗು ಮತ್ತು ಮಗುವಿಗೆ ಜನ್ಮ ನೀಡಿದ ಆಕೆಯ ಸಂಗಾತಿ ಸಹದ್ ಆರೋಗ್ಯವಾಗಿದ್ದಾರೆ ಎಂದು ಪಾವಲ್ ಹೇಳಿದ್ದಾರೆ. ಆದಾಗ್ಯೂ, ನವಜಾತ ಶಿಶುವಿನ ಲಿಂಗದ ಗುರುತನ್ನು ಬಹಿರಂಗಪಡಿಸಲು ನಿರಾಕರಿಸಿದ್ದು, ಅದನ್ನು ಸಾರ್ವಜನಿಕಗೊಳಿಸಲು ಬಯಸುವುದಿಲ್ಲ ಎಂದು ಹೇಳಿದ್ದಾರೆ. ಆದರೂ ಜನಿಸಿದ ಮಗು ಗಂಡು ಎಂದು ಮೂಲಗಳು ತಿಳಿಸಿವೆ.



Join Whatsapp