ಅಮೆರಿಕದಲ್ಲಿ ದಾವಣಗೆರೆ ಮೂಲದ ದಂಪತಿ ಆತ್ಮಹತ್ಯೆ ಕೇಸ್‌ ಗೆ ಟ್ವಿಸ್ಟ್: ಪತ್ನಿ, ಮಗುವಿಗೆ ಗುಂಡು ಹಾರಿಸಿ ತಾನು ಆತ್ಮಹತ್ಯೆ ಮಾಡಿಕೊಂಡ ಟೆಕ್ಕಿ

Prasthutha|

ದಾವಣಗೆರೆ: ಅಮೆರಿಕದಲ್ಲಿ ದಾವಣಗೆರೆ ಮೂಲದ ದಂಪತಿ ನಿಗೂಢ ಸಾವಿನ ವಿಚಾರ ಇದೀಗ ಬಹಿರಂಗಗೊಂಡಿದ್ದು, ಪುತ್ರ ಹಾಗೂ ಪತ್ನಿಯನ್ನು ಗುಂಡಿಕ್ಕಿ ಕೊಂದು ಬಳಿಕ ಪತಿಯೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಮಾಹಿತಿ ಹೊರ ಬಿದ್ದಿದೆ.

- Advertisement -

ಯೋಗೇಶ್ ಹೊನ್ನಾಳ(37), ಪ್ರತಿಭಾ(35), ಯಶ್(6) ಮೃತರು.

ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಹಾಲೆಕಲ್ಲು ನಿವಾಸಿಗಳಾಗಿದ್ದಾರೆ. ಕಳೆದ 9 ವರ್ಷಗಳಿಂದ ಅಮೆರಿಕದಲ್ಲಿ ವಾಸವಾಗಿದ್ದರು. ಯೋಗೇಶ್, ಪ್ರತಿಭಾ ಇಬ್ಬರೂ ವೃತ್ತಿಯಲ್ಲಿ ಇಂಜಿನಿಯರ್ ಆಗಿದ್ದರು.

- Advertisement -

ಆದರೆ ಕಳೆದ ಎರಡು ದಿನಗಳಿಂದ ದಂಪತಿ ಯಾರೂ ಮನೆಯಿಂದ ಹೊರಗೆ ಬಾರದೇ ಇರುವುದನ್ನು ಗಮನಿಸಿದ ಅಕ್ಕಪಕ್ಕದ ಮನೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮನೆ ಬಳಿ ಬಂದು ಗಮನಿಸಿದಾಗ ಪೊಲೀಸರಿಗೆ ಮೂವರು ಮೃತಪಟ್ಟಿರುವುದು ಗೊತ್ತಾಗಿದೆ. ತಕ್ಷಣ ಬೆಂಗಳೂರಿನಲ್ಲಿ ಇದ್ದ ಯೋಗೇಶ್ ಸಹೋದರನಿಗೆ ಫೋನ್ ಮೂಲಕ ವಿಷಯ ಮುಟ್ಟಿಸಿದ್ದಾರೆ.

ಆದರೆ ಬಾಲ್ಟಿಮೋರ್ ಕೌಂಟಿ ಪೊಲೀಸರು ಪ್ರಾಥಮಿಕ ಹೇಳಿಕೆ ಬಿಡುಗಡೆ ಮಾಡಿದ್ದು, ಪತಿ ಮತ್ತು ಪತ್ನಿಯ ನಡುವಿನ ಕಲಹವೇ ಘಟನೆಗೆ ಕಾರಣ ಎನ್ನಲಾಗಿದೆ. ಪುತ್ರ ಯಶ್ ಹಾಗೂ ಪತ್ನಿ ಪ್ರತಿಭಾಳ ಹತ್ಯೆ ನಡೆಸಿ ನಂತರ ಪತಿ ಯೋಗೇಶ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಮರಣೋತ್ತರ ಪರೀಕ್ಷೆ ಬಳಿಕ ಸಂಪೂರ್ಣ ಮಾಹಿತಿ ಬಹಿರಂಗವಾಗಲಿದೆ

Join Whatsapp