ರೈಲು ಹಳಿಗೆ ತಲೆಕೊಟ್ಟ ವ್ಯಕ್ತಿಯನ್ನು ರಕ್ಷಿಸಿದ ಮಹಿಳಾ ಕಾನ್‌ ಸ್ಟೇಬಲ್!

Prasthutha|

- Advertisement -

ಕೋಲ್ಕತ್ತಾ: ರೈಲು ಹಳಿಗೆ ತಲೆ ಕೊಟ್ಟ ವ್ಯಕ್ತಿಯನ್ನು ರೈಲ್ವೆ ಸಿಬ್ಬಂದಿ ರಕ್ಷಿಸಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ.

ವ್ಯಕ್ತಿಯನ್ನು ಸಿಬ್ಬಂದಿ ರಕ್ಷಿಸುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

- Advertisement -

ರೈಲ್ವೆ ಪ್ಲಾಟ್‌ ಫಾರ್ಮ್‌ ನಲ್ಲಿ ನಿಂತಿದ್ದ ವ್ಯಕ್ತಿಯೊಬ್ಬರು ಹಠಾತ್ತನೆ ಹಳಿ ಮೇಲೆ ತಲೆ ಕೊಟ್ಟು ಮಲಗಿದ್ದಾನೆ. ಇದನ್ನು ಗಮನಿಸಿದ ರೈಲ್ವೆ ಸಿಬ್ಬಂದಿ ತಕ್ಷಣ ಟ್ರ್ಯಾಕ್‌ ಬಳಿ ತೆರಳಿ ವ್ಯಕ್ತಿಯನ್ನು ಎಳೆದುಕೊಂಡಿದ್ದಾರೆ. ಈ ವೇಳೆ ಪ್ಲಾಟ್‌ ಫಾರ್ಮ್‌ ನಲ್ಲಿ ಇನ್ನಿಬ್ಬರು ಸಿಬ್ಬಂದಿ ನೆರವಿಗೆ ಧಾವಿಸಿದ್ದಾರೆ. ಈ ವೇಳೆ ರೈಲೊಂದು ಪಾಸ್‌ ಆಗುತ್ತದೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

Join Whatsapp