Home ಟಾಪ್ ಸುದ್ದಿಗಳು ಚಿಕ್ಕಮಗಳೂರು: ಆಸ್ಪತ್ರೆಯಿಂದ ಮನೆಗೆ ಹಿಂದಿರುಗುವಾಗ ನದಿಯಲ್ಲಿ ಕೊಚ್ಚಿ ಹೋಗಿ ಮಹಿಳೆ ಮೃತ

ಚಿಕ್ಕಮಗಳೂರು: ಆಸ್ಪತ್ರೆಯಿಂದ ಮನೆಗೆ ಹಿಂದಿರುಗುವಾಗ ನದಿಯಲ್ಲಿ ಕೊಚ್ಚಿ ಹೋಗಿ ಮಹಿಳೆ ಮೃತ

ಚಿಕ್ಕಮಗಳೂರು: ಆಸ್ಪತ್ರೆಗೆ ಹೋಗಿ ಮನೆಗೆ ಹಿಂದಿರುಗುತ್ತಿದ್ದ ಮಹಿಳೆ ಭದ್ರಾ ನದಿಯಲ್ಲಿ ಕೊಚ್ಚಿ ಹೋಗಿ ಮೃತಪಟ್ಟಿರುವ ಘಟನೆ ನಡೆದಿದೆ.

ಜಿಲ್ಲೆಯ ಕಳಸ ಪಟ್ಟಣ ಸಮೀಪದ ಗೇರು ತೋಟ ನಿವಾಸಿ ಶಾರದಾ (55) ಮೃತರು.

ಜು.16 ರಂದು ಶಾರದಾ ಅವರು ಎನ್.ಆರ್.ಪುರದ ಆಸ್ಪತ್ರೆಗೆ ಹೋಗಿ ಬರುವುದಾಗಿ ಮನೆಯಿಂದ ಬಂದಿದ್ದರು. ಆಸ್ಪತ್ರೆ ಹೋಗುವುದಾಗಿ ಹೇಳಿ ಬಂದಿದ್ದ ಶಾರದಾ ಮತ್ತೆ ಮನೆಗೆ ಹಿಂದಿರುಗಿರಲಿಲ್ಲ. ಕುಟುಂಬಸ್ಥರು ಪೊಲೀಸರಿಗೆ ಕಾಣೆಯಾಗಿರುವ ಬಗ್ಗೆ ದೂರು ನೀಡಿದ್ದರು.

ಇಂದು ಬೆಳಗ್ಗೆ ಗೇರುತೋಟ ಸಮೀಪದಲ್ಲಿ ಹರಿಯುವ ಭದ್ರಾ ನದಿಯಲ್ಲಿ ಮಹಿಳೆಯ ಶವವನ್ನು ಸ್ಥಳೀಯರು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳೀಯ ಪೊಲೀಸರು ಧರ್ಮಸ್ಥಳ ವಿಪತ್ತು ನಿರ್ವಹಣ ತಂಡದವರ ನೆರವಿನಿಂದ ನದಿಯಲ್ಲಿದ್ದ ಶವವನ್ನು ಹೊರ ತೆಗೆದಿದ್ದಾರೆ.

ಮಹಿಳೆ ಕಾಲು‌ಜಾರಿ ನದಿಗೆ ಬಿದ್ದು ಮೃತಪಟ್ಟಿರಬಹುದು ಎಂದು‌ ಪೊಲೀಸರು ಶಂಕಿಸಿದ್ದಾರೆ.

Join Whatsapp
Exit mobile version