ಕತಾರ್ ಫಿಫಾ ವರ್ಲ್ಡ್ ಕಪ್ ಮೆಡಿಕಲ್ ತಂಡದಲ್ಲಿ ಕರಾವಳಿಯ ಮಹಿಳೆ

Prasthutha|

ಕತಾರ್ ಫಿಫಾ ವರ್ಲ್ಡ್ ಕಪ್ ಮೆಡಿಕಲ್ ತಂಡದಲ್ಲಿ ಸೇವೆ ಸಲ್ಲಿಸಲು ಕರಾವಳಿಯ ಮಹಿಳೆಯೊಬ್ಬರು ಆಯ್ಕೆಯಾಗಿದ್ದಾರೆ.

- Advertisement -

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕುಡಂಬೆಟ್ಟು ಗ್ರಾಮದ ದೋಟ ದರ್ಖಾಸು ನಿವಾಸಿ ನವೀನ್ ಪೂಜಾರಿ ಎಂಬವರ ಪತ್ನಿ ಪ್ರತಿಭಾ ಎನ್. ದರ್ಖಾಸು ಎಂಬವರು ಈ ಅವಕಾಶ ಗಿಟ್ಟಿಸಿಕೊಂಡಿದ್ದು,  ವರ್ಲ್ಡ್ ಕಪ್ ಮೆಡಿಕಲ್ ಟೀಮಿಗೆ ಆಯ್ಕೆಯಾದ ಕರ್ನಾಟಕದ ಏಕೈಕ ಮಹಿಳೆ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ.

ಪ್ರತಿಭಾ, ಕತಾರಿನ ಹಾಮದ್ ಮೆಡಿಕಲ್ ಕಾರ್ಪೋರೇಶನ್ ಸರಕಾರಿ ಅಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದು, ಕೊರೋನಾ ಸಹಿತ ಇತರ ಸಂದರ್ಭದಲ್ಲಿನ  ವಿಶೇಷ ಸೇವೆಯನ್ನು ಗುರುತಿಸಿ ಈಗಾಗಲೇ  ಅವರನ್ನು ಗೌರವಿಸಲಾಗಿತ್ತು.

Join Whatsapp