ನೇತ್ರಾವತಿ ನದಿಗೆ ಹಾರಿ ಯುವಕ ಆತ್ಮಹತ್ಯೆ

Prasthutha|

ಬಂಟ್ವಾಳ: ಪಾಣೆಮಂಗಳೂರು ಸೇತುವೆಯಿಂದ ನೇತ್ರಾವತಿ ನದಿಗೆ ಹಾರಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ನಡೆದಿದೆ.

- Advertisement -

ಗೋಳ್ತಮಜಲು ಗ್ರಾಮದ ನೆಟ್ಲ ಸಮೀಪದ ನಿವಾಸಿ ಪ್ರವೀಣ್‌ (38) ಆತ್ಮಹತ್ಯೆ ಮಾಡಿಕೊಂಡ ಯುವಕ. ಮೆಕ್ಯಾನಿಕ್‌ ಕೆಲಸ ಮಾಡಿಕೊಂಡಿದ್ದ ಪ್ರವೀಣ್‌ ಕಳೆದ ಕೆಲವು ದಿನಗಳಿಂದ ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದು, ಗುರುವಾರ ಮಧ್ಯಾಹ್ನದ ವೇಳೆಗೆ ಬೈಕಿನಲ್ಲಿ ಆಗಮಿಸಿ ಬೈಕ್‌ ಹಾಗೂ ಚಪ್ಪಲಿಯನ್ನು ಸೇತುವೆಯ ಮೇಲಿಟ್ಟು ನದಿಗೆ ಹಾರಿದ್ದಾರೆ ಎನ್ನಲಾಗಿದೆ.

ಬಳಿಕ ಯುವಕ ನದಿಗೆ ಹಾರಿರುವ ವಿಚಾರ ತಿಳಿದು ಸ್ಥಳೀಯ ಮುಳುಗು ತಜ್ಞರು, ಪೊಲೀಸರು, ಬಂಟ್ವಾಳ ಅಗ್ನಿಶಾಮಕ ದಳದವರು ಹುಡುಕಾಟ ನಡೆಸಿದ್ದು, ಸಂಜೆಯ ವೇಳೆ ಮೃತದೇಹ ಪತ್ತೆಯಾಗಿದೆ. ಪ್ರವೀಣ್‌ ಅವರು ಈ ಹಿಂದೆಯೂ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ ಎಂದು ಪೊಲೀಸ್‌ ದೂರಿನಲ್ಲಿ ತಿಳಿಸಲಾಗಿದೆ. ಬಂಟ್ವಾಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



Join Whatsapp