ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕಳೆದೆರಡು ದಿನಗಳಿಂದ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಮಳೆಯ ನೀರಿಗೆ ಯುವತಿಯೊಬ್ಬಳು ಸಾವನ್ನಪ್ಪಿದ್ದಾಳೆ.
ಈ ದುರ್ಘಟನೆ ಬೆನ್ನಲ್ಲೇ ನಿನ್ನೆಯ ಮಹಾಮಳೆಗೆ ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ಯುವಕನೋರ್ವ ರಾಜಕಾಲುವೆಯಲ್ಲಿ ಕೊಚ್ಚಿಹೋಗಿರುವ ಘಟನೆ ನಡೆದಿದೆ. ಕೆಪಿ ಅಗ್ರಹಾರದ ರಾಜಕಾಲುವೆಯಲ್ಲಿ ಕೊಚ್ಚಿಕೊಂಡು ಹೋಗಿದ್ದ ಲೋಕೇಶ್(31) ಮೃತದೇಹ ಇಂದು(ಮೇ 22) ಬ್ಯಾಟರಾಯನಪುರದ ರಾಜಕಾಲುವೆ ಬಳಿ ಪತ್ತೆಯಾಗಿದೆ.