ಸಿಗದ ಟಿಕೆಟ್: ಆಮ್ ಆದ್ಮಿ ಪಕ್ಷದ ಮುಖಂಡ ಆತ್ಮಹತ್ಯೆ

ನವದೆಹಲಿ: ಚುನಾವಣೆಯಲ್ಲಿ ಟಿಕೆಟ್ ಸಿಗದಿದ್ದಕ್ಕೆ ಆಮ್ ಆದ್ಮಿ ಪಕ್ಷದ ಟ್ರೇಡ್ ವಿಭಾಗದ ದೆಹಲಿ ರಾಜ್ಯ ಕಾರ್ಯದರ್ಶಿ ಸಂದೀಪ್ ಭಾರದ್ವಾಜ್ ಆತ್ಮಹತ್ಯೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.


ದೆಹಲಿ ಮುನ್ಸಿಪಲ್ ಕಾರ್ಪೋರೇಷನ್ ಚುನಾವಣೆಗೆ ಸ್ಪರ್ಧಿಸಲು ಪಕ್ಷದಿಂದ ಟಿಕೆಟ್ ಪಡೆಯಲು ಸಂದೀಪ್ ಭಾರದ್ವಾಜ್ ಸಾಕಷ್ಟು ಪ್ರಯತ್ನ ಪಟ್ಟಿದ್ದರು. ಆದರೆ, ಅವರಿಗೆ ಟಿಕೆಟ್ ಸಿಕ್ಕಿರಲಿಲ್ಲ. ಇದೇ ಕಾರಣದಿಂದ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಈ ಸಾವಿಗೆ ನಿಖರ ಕಾರಣಗಳು ಇನ್ನೂ ಪತ್ತೆಯಾಗಬೇಕಾಗಿದೆ.

- Advertisement -


ಸಂದೀಪ್ ಭಾರದ್ವಾಜ್ ನೇಣು ಬಿಗಿದ ಸ್ಥಿತಿಯಲ್ಲಿದ್ದ ಹಿನ್ನೆಲೆಯಲ್ಲಿ ಕಂಡು ಬಂದಾಗ ಅವರ ಸ್ನೇಹಿತರು ಆಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ, ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದರು.
ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.