Home ಟಾಪ್ ಸುದ್ದಿಗಳು ಅಮೀರ್ ಖಾನ್ ಡೀಪ್ಫೇಕ್: ಅಪರಿಚಿತ ವ್ಯಕ್ತಿಯ ವಿರುದ್ಧ ಎಫ್ ಐಆರ್

ಅಮೀರ್ ಖಾನ್ ಡೀಪ್ಫೇಕ್: ಅಪರಿಚಿತ ವ್ಯಕ್ತಿಯ ವಿರುದ್ಧ ಎಫ್ ಐಆರ್

ಮುಂಬೈ: ನಟ ಅಮೀರ್ ಖಾನ್ ಅವರು ನಿರ್ದಿಷ್ಟ ರಾಜಕೀಯ ಪಕ್ಷವೊಂದನ್ನು ಬೆಂಬಲಿಸುವ ರೀತಿಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಡೀಪ್ ಫೇಕ್ ವಿಡಿಯೊಗೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧ ಬುಧವಾರ ಎಫ್ ಐಆರ್ ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಾಹಿತಿ ತಂತ್ರಜ್ಞಾನ ಕಾಯಿದೆ ಮತ್ತು ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಎಫ್ಐಆರ್ ದಾಖಲಾಗಿದೆ.


ಈ ಕುರಿತು ಹೇಳಿಕೆ ನೀಡಿರುವ ಆಮೀರ್ ಪರ ವಕ್ತಾರರು, ‘ಕೃತಕ ಬುದ್ಧಿಮತ್ತೆ (AI) ಬಳಸಿ 27 ಸೆಕೆಂಡ್ಗಳ ವಿಡಿಯೊ ತಯಾರಿಸಲಾಗಿದೆ. ಇದು ಸಂಪೂರ್ಣ ನಕಲಿ’ ಎಂದು ಅವರು ಸ್ಪಷ್ಟಪಡಿಸಲು ಬಯಸುತ್ತಾರೆ ಎಂದು ಹೇಳಿದ್ದಾರೆ.

Join Whatsapp
Exit mobile version