ನವದೆಹಲಿ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ನಿವಾಸದ ಮೇಲೆ ED ದಾಳಿ ನಡೆದು ಅವರನ್ನು ಬಂಧಿಸುವ ಸಾಧ್ಯತೆ ಇದೆ ಎಂದು ಆಮ್ ಆದ್ಮಿ ಪಕ್ಷ ಹೇಳಿದೆ.
ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸಮನ್ಸ್ ಜಾರಿಗೊಳಿಸಿದ್ದರೂ ವಿಚಾರಣೆಗೆ ದೆಹಲಿ ಸಿಎಂ ಗೈರಾಗಿದ್ದರು. ಈಗ ಇದೇ ಪ್ರಕರಣದಲ್ಲಿ ದೆಹಲಿ ಸಿಎಂ ಕೇಜ್ರಿವಾಲ್ ಅವರನ್ನು ಬಂಧಿಸುವ ಸಾಧ್ಯತೆ ಇದೆ, ಅವರ ನಿವಾಸಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಪ್ರವೇಶಿಸದಂತೆ ದೆಹಲಿ ಪೊಲೀಸರು ನಿರ್ಬಂಧ ವಿಧಿಸಿದ್ದಾರೆ ಎಂದು ಆಮ್ ಆದ್ಮಿ ಪಕ್ಷ ಆರೋಪಿಸಿದೆ.
ಸಿಎಂ ಮನೆಗೆ ಹೋಗುವ ರಸ್ತೆಗಳನ್ನು ಮುಚ್ಚಲಾಗಿದೆ. ಎಲ್ಲಾ ಪ್ರವೇಶ/ನಿರ್ಗಮನ ಗೇಟ್ಗಳಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ಸಿಎಂ ಮನೆಗೆ ನಿಯೋಜಿಸಲಾದ ಸಿಬ್ಬಂದಿಯನ್ನು ಒಳಗೆ ಪ್ರವೇಶಿಸದಂತೆ ತಡೆಯಲಾಗಿದೆ’ಎಂದು ಆಮ್ ಆದ್ಮಿ ಪಕ್ಷದ ಮೂಲಗಳು ತಿಳಿಸಿವೆ.